Breaking News

ಕೆಆರ್ ಸರ್ಕಲ್ ಬಳಿ ಭೀಕರ ಅಪಘಾತ – ಗಾಯಾಳುಗಳ ಆರೋಗ್ಯ ವಿಚಾರಿಸಿದ ಬೈರತಿ ಸುರೇಶ್

Spread the love

ಬೆಂಗಳೂರು: ಕೆಆರ್ ಸರ್ಕಲ್ ಬಳಿ ನಡೆದ ಭೀಕರ ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾರಿಗೆ ಸಚಿವ ಬೈರತಿ ಸುರೇಶ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯವನ್ನು ವಿಚಾರಿಸಿದ್ದಾರೆ.

ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ವೈದ್ಯರಿಂದಲೂ ಮಾಹಿತಿ ಪಡೆದುಕೊಂಡಿದ್ದಾರೆ.

ಬಳಿಕ ಮಾತನಾಡಿದ ಅವರು, ಕೆ.ಆರ್ ಸರ್ಕಲ್‌ನಲ್ಲಿ ಬೆಳಗ್ಗೆ ಎರಡು ಇವಿ ಬಿಎಂಟಿಸಿ ನಡುವೆ ಅಪಘಾತ ಸಂಭವಿಸಿದೆ. ಅವಘಡದಲ್ಲಿ 16 ಜನ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವರ ದಯೆಯಿಂದ ಕೆಲವರು ಡಿಸ್ಚಾರ್ಜ್ ಆಗ್ತಿದ್ದಾರೆ. ಮೂವರಿಗೆ ಎಂಆರ್‌ಐ, ಸಿಟಿ ಸ್ಕ್ಯಾನ್ ಮಾಡಿದಾರೆ. ಒಂದು ಬಸ್ ಸಿಗ್ನಲ್‌ನಲ್ಲಿ ನಿಂತಿತ್ತು. ಈ ವೇಳೆ ಮತ್ತೊಂದು ಬಸ್ ಹಿಂದಿನಿಂದ ಬಂದು ಗುದ್ದಿದೆ. ನಮ್ಮ ಸಿಬ್ಬಂದಿ ಗಾಯಾಳುಗಳನ್ನು ಕರೆತಂದು ಅಡ್ಮಿಟ್ ಮಾಡಿಸಿದ್ದಾರೆ. ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರದಿಂದ ಭರಿಸುತ್ತೇವೆ ಎಂದು ಹೇಳಿದ್ದಾರೆ.

ಇನ್ನೂ ವೇಗದ ಚಾಲನೆ ಮಾಡಿದ್ರಾ ಅಂತ ಪರಿಶೀಲನೆ ಮಾಡ್ತೇವೆ. ಇವಿ ಬಸ್‌ಗಳ ಅಪಘಾತ ಹೆಚ್ಚಾಗುತ್ತಿವೆ. ಇದರ ಸ್ಥಿತಿಗತಿ ಬಗ್ಗೆ ವರದಿ ತರಿಸಿಕೊಳ್ಳುತ್ತೇವೆ ಎಂದಿದ್ದಾರೆ.


Spread the love

About Laxminews 24x7

Check Also

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

Spread the loveಹಾವೇರಿ: ನೌಕಾಪಡೆಯ ಯೋಧ  ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ  ಜಿಲ್ಲೆಯ ಹಾನಗಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ