Breaking News

SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ಅಪಘಾತ – ವಿಎ ಸಾವು ಬದುಕಿನ ನಡುವೆ ಹೋರಾಟ

Spread the love

ತುಮಕೂರು: ಎಸ್‌ಐಆರ್ ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗ್ರಾಮ ಲೆಕ್ಕಾಧಿಕಾರಿ  ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಘಟನೆ ತುಮಕೂರಿನ  ಗೂಳೂರಿನಲ್ಲಿ ನಡೆದಿದೆ.

ಭಾವನಾ (26) ಗಂಭೀರ ಗಾಯಗೊಂಡಿರುವ ವಿಎ. ಗೂಳೂರು ಹೋಬಳಿಯ ಮನೆ ಮನೆಗೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿರುವ ಭಾವನಾಗೆ ಸಿದ್ದಗಂಗಾ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಅಧಿಕಾರಿಗಳ ವಿರುದ್ಧ ಆಕ್ರೋಶ:
ಸಿದ್ದಗಂಗಾ ಆಸ್ಪತ್ರೆ ಬಳಿ ಜಮಾಯಿಸಿರುವ ಗ್ರಾಮ ಲೆಕ್ಕಾಧಿಕಾರಿಗಳು ಬೇಗ ಬೇಗ ಎಸ್‌ಐಆರ್ ಮುಗಿಸುವಂತೆ ಒತ್ತಡ ಹಾಕುವ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಭೇಟಿ ನೀಡಿದ್ದು, ಗ್ರಾಮ ಲೆಕ್ಕಾಧಿಕಾರಿಗಳ ಅಹವಾಲು ಆಲಿಸುತ್ತಿದ್ದಾರೆ.  

ಇನ್ನು, ಜಿಲ್ಲಾಧಿಕಾರಿಗಳ ವಿರುದ್ಧ ಭಾವನಾ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ರಾತ್ರಿ 10 ಗಂಟೆವರೆಗೆ ಮೀಟಿಂಗ್ ಮಾಡುತ್ತೀರಿ. ಬೆಳಗ್ಗೆ 6 ಗಂಟೆಗೆ ಮತ್ತೆ ಕೆಲಸಕ್ಕೆ ಕರೆಯುತ್ತೀರಿ. ನಿಮಗೆ ರ‍್ಯಾಂಕಿಂಗ್ ಬೇಕು, ಪ್ರೊಮೋಷನ್ ಬೇಕು. ಅದಕ್ಕೆ ನಮ್ಮ ಮಕ್ಕಳನ್ನು ಬಲಿ ಕೊಡುತ್ತೀರಾ ಎಂದು ಪೋಷಕರು ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ