Breaking News

ಮಹಾರಾಷ್ಟ್ರ ಡಿಸಿಎಂ ಏಕನಾಥ್ ಶಿಂಧೆ ಆಸ್ಪತ್ರೆಗೆ ದಾಖಲು

Spread the love

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ  ಅವರನ್ನು ಇಂದು (ಜು.4) ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂಲಗಳ ಪ್ರಕಾರ, ನಿನ್ನೆಯಿಂದ ಅವರು ಜ್ವರ ಮತ್ತು ಮೈಕೈ ನೋವಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ವೈದ್ಯರ ಸಲಹೆಯ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ.

ಸದ್ಯ ಏಕನಾಥ್ ಶಿಂಧೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ವಿಶೇಷ ತಂಡವೊಂದು ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಕಳೆದ ಕೆಲವು ದಿನಗಳಿಂದ ಅತಿಯಾದ ಕೆಲಸ ಹಾಗೂ ಸತತ ರಾಜಕೀಯ ಕಾರ್ಯಕ್ರಮಗಳಿಂದಾಗಿ ಶಿಂಧೆ ಅವರ ಆರೋಗ್ಯ ಕೈಕೊಟ್ಟಿದೆ. ಶುಕ್ರವಾರ (ಜು.3) ಶುಕ್ರವಾರ ಅಧಿವೇಶನ ನಡೆಯುತ್ತಿದ್ದಾಗ ಜ್ವರ ಬಂದು, ಸುಸ್ತು ಕಾಣಿಸಿಕೊಂಡಿತ್ತು ಎಂದು ತಿಳಿದುಬಂದಿದೆ.

ಸದ್ಯ ಅವರ ಆರೋಗ್ಯ ಸರಿಯಿಲ್ಲದ ಕಾರಣ, ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಶಿವಸೇನಾ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ