Breaking News

ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

Spread the love

ಕಾರವಾರ: ಕೊರೊನಾ ಸೋಂಕಿಗೆ ಒಳಗಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಕಾರವಾರ ಮೆಡಿಕಲ್ ಕಾಲೇಜಿನ ಕೋವಿಡ್-19 ವಾರ್ಡ್ ನಲ್ಲಿ ಶಿರಸಿ ತಾಲೂಕಿನ 76 ವರ್ಷದ ವೃದ್ಧ ಹಾಗೂ ಭಟ್ಕಳದ 65 ವರ್ಷದ ವೃದ್ಧೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಶಿರಸಿ ತಾಲೂಕಿನ 76 ವರ್ಷದ ವೃದ್ಧ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕೊರೊನಾ ದೃಢಪಟ್ಟಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿರಸಿಯಿಂದ ಕ್ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಭಟ್ಕಳದ 65 ವರ್ಷದ ವೃದ್ಧೆ ಸಹ ಉಸಿರಾಟದ ಸಮಸ್ಯೆ ಹಾಗೂ ಮಧುಮೇಹದಿಂದ ಬಳಲುತ್ತಿದ್ದರು. ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ಕ್ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತಿದ್ದರು. ಇವರೂ ತೀವ್ರ ಉಸಿರಾಟದ ಸಮಸ್ಯೆಯಿಂದ ಇಂದು ಸಾವನ್ನಪ್ಪಿದ್ದಾರೆ. ಕೊರೊನಾದಿಂದ ಜಿಲ್ಲೆಯಲ್ಲಿ ಒಟ್ಟು 10 ಜನ ಸಾವನ್ನಪ್ಪಿದ್ದರು. ಇದೀಗ ಇವರಿಬ್ಬರು ಸಾವನ್ನಪ್ಪುವ ಮೂಲಕ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಬಹುತೇಕರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದವರೇ ಆಗಿದ್ದಾರೆ.

ಇವರ ಅಂತಿಮ ಸಂಸ್ಕಾರವನ್ನು ಅವರ ತಾಲೂಕಿನಲ್ಲಿಯೇ ಸಂಬಂಧಿಕರ ಸಮ್ಮುಖದಲ್ಲಿ ಕೋವಿಡ್-19 ನಿಯಮಾನುಸಾರ ನೆರವೇರಿಸುವುದಾಗಿ ಜಿಲ್ಲಾಡಳಿತ ತಿಳಿಸಿದೆ.


Spread the love

About Laxminews 24x7

Check Also

ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ

Spread the loveಅಂಕೋಲಾ : ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ