Breaking News

ಕಾಲ್ನಡಿಗೆಯಲ್ಲೇ ಬೆಟ್ಟ ಏರಿ ತಿರುಪತಿ ದರ್ಶನ ಪಡೆದ ಕರ್ನಾಟಕದ 116 ವರ್ಷದ ವೃದ್ಧೆ; ಹಾಡಿಹೊಗಳಿದ ಆಂಧ್ರ ಸಿಎಂ

Spread the love

ತಿರುಪತಿ: ಕರ್ನಾಟಕದ 116 ವರ್ಷದ ನವನೀತಮ್ಮ  ಕಾಲ್ನಡಿಗೆಯಲ್ಲೇ ತಿರುಮಲ ಬೆಟ್ಟ ಏರಿ ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ. ಅವರ ಈ ಅಪರೂಪದ ಭಕ್ತಿ ಮತ್ತು ಸಾಧನೆ ದೇಶಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದ್ದು, ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು  ಎಕ್ಸ್‌ (X) ನಲ್ಲಿ ಪೋಸ್ಟ್‌ ಮಾಡುವ ಮೂಲಕ ಅವರನ್ನು ಹಾಡಿಹೊಗಳಿದ್ದಾರೆ.

ಕುಟುಂಬದ ಸದಸ್ಯರೊಂದಿಗೆ ನವನೀತಮ್ಮ ತಿರುಮಲದ ಮೆಟ್ಟಿಲುಗಳನ್ನು ಏರಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಯಸ್ಸು ಎಷ್ಟೇ ಆಗಿದ್ದರೂ ಭಕ್ತಿ ಮತ್ತು ದೃಢಸಂಕಲ್ಪ ಇದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಅವರು ತೋರಿಸಿಕೊಟ್ಟಿದ್ದಾರೆ. ವೃದ್ಧೆ ಮೆಟ್ಟಿಲೇರುತ್ತಿರುವ ವಿಡಿಯೋ ನೋಡಿ ಸಾವಿರಾರು ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ನವನೀತಮ್ಮ ಅವರ ಭಕ್ತಿಯನ್ನು ಗಮನಿಸಿದ ತಿರುಮಲ ತಿರುಪತಿ ದೇವಸ್ಥಾನ  ಅಧಿಕಾರಿಗಳು ಅವರಿಗೆ ಮತ್ತು ಅವರ ಕುಟುಂಬಕ್ಕೆ ವಿಶೇಷ ವಿಐಪಿ ಬ್ರೇಕ್ ದರ್ಶನದ ವ್ಯವಸ್ಥೆ ಮಾಡಿದ್ದರು. ಇದರಿಂದ ಯಾವುದೇ ತೊಂದರೆ ಇಲ್ಲದೆ ಅವರು ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಪ್ರತಿಕ್ರಿಯೆ
ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಕೂಡ ನವನೀತಮ್ಮ ಅವರ ಯಾತ್ರೆಯನ್ನು ಶ್ಲಾಘಿಸಿದ್ದಾರೆ. “ಶುದ್ಧ ಭಕ್ತಿಗೆ ವಯಸ್ಸು ಅಡ್ಡಿಯಾಗುವುದಿಲ್ಲ. ಕರ್ನಾಟಕದ 116 ವರ್ಷದ ಅಜ್ಜಿ ಕಾಲ್ನಡಿಗೆಯಲ್ಲೇ ತಿರುಮಲ ತಲುಪಿ ಸ್ವಾಮಿಯ ದರ್ಶನ ಪಡೆದಿದ್ದಾರೆ. ಅವರ ಭಕ್ತಿಗೆ ಮತ್ತು ಅವರಿಗೆ ಬೆಂಬಲವಾಗಿ ನಿಂತ ಕುಟುಂಬಕ್ಕೂ ಅಭಿನಂದನೆಗಳು. ಇದು ನಿಜಕ್ಕೂ ಸ್ಪೂರ್ತಿದಾಯಕ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿಯ ಪೋಸ್ಟ್‌ಗೆ ಸಾವಿರಾರು ಜನ ಪ್ರತಿಕ್ರಿಯಿಸಿದ್ದು, ನವನೀತಮ್ಮ ಅವರ ಭಕ್ತಿ, ಧೈರ್ಯ ಮತ್ತು ಕುಟುಂಬದ ಬೆಂಬಲವನ್ನು ಮೆಚ್ಚಿಕೊಂಡಿದ್ದಾರೆ. ಅವರ ಈ ಯಾತ್ರೆ ಅನೇಕರಿಗೆ ಪ್ರೇರಣೆಯ ಕಥೆಯಾಗಿದೆ.


Spread the love

About Laxminews 24x7

Check Also

ರಾಜ್ಯದಲ್ಲಿ SIR ಲೋಪ – ಬಿಜೆಪಿ, ಜೆಡಿಎಸ್‌ನ ಮೈತ್ರಿ ನಾಯಕರಿಂದ ಮುಖ್ಯ ಚುನಾವಣಾಧಿಕಾರಿಗೆ ದೂರು

Spread the loveಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ನಲ್ಲಿ  ಕೆಲವು ಲೋಪ ಕಂಡುಬಂದ ಹಿನ್ನೆಲೆ ಬಿಜೆಪಿ, ಜೆಡಿಎಸ್  ಮೈತ್ರಿ ನಾಯಕರು ಮುಖ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ