Breaking News

ಕೃಷ್ಣಾ ನದಿ ನೀರಿನ ಪ್ರಮಾಣ ಇನಷ್ಟು ಹೆಚ್ಚಳ

Spread the love

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕೋಡಿ ಉಪ ವಿಭಾಗ ಕೃಷ್ಣಾ ವೇದಗಂಗಾ, ದೂಧಗಂಗಾ ನದಿಗಳ ನೀರಿನ ಮಟ್ಟ ಭಾನುವಾರ ಇಂದು ಏರಿಕೆಯಾಗಿದೆ.
ಕೊಯ್ನಾ ಜಲಾನಯನ ಪ್ರದೇಶ ಮತ್ತು ಕೃಷ್ಣಾ ಅಚ್ಚಕಟ್ಟು ಪ್ರದೇಶದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿಗೆಮಹಾರಾಷ್ಟ್ರ ರಾಜಾಪುರ ಬ್ಯಾರೇಜ್ ಮೂಲಕ 42 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ವೇದಗಂಗಾ,ದೂಧಗಂಗಾ ನದಿಗಳ ನೀರು ಸೇರಿ ಚಿಕ್ಕೋಡಿ ತಾಲೂಕಿನ ಕಲ್ಲೋಳ ಬ್ಯಾರೇಜ್‌ನಲ್ಲಿ ಕೃಷ್ಣ ನದಿಗೆ ಒಟ್ಟು 53 ಸಾವಿರ ಒಳ ಹರಿವು ಸೇರಿದೆ.
ಕಳೆದ ಒಂದು ವಾರದ ಹಿಂದಷ್ಟೇ ಬರಿದಾಗ ಜಿಲ್ಲೆಯ ಕೃಷ್ಣ, ವೇದಗಂಗಾ, ದೂಧಗಂಗಾ, ಹಿರಣ್ಯಕೇಶಿ, ಘಟಪ್ರಭ ನದಿಗಳು ಮಳೆಯಿಂದ ಮೈದುಂಬಿ ಹರಿಯುತ್ತಿವೆ.
ಕೆಳ ಹಂತದ ಸೇತುವೆಗಳು ಜಲಾವೃತ:
ಜಿಲ್ಲೆಯ ನದಿಗಳ ನೀರಿನ ಮಟ್ಟದಿಂದ ಕೆಲ ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ, ನಿಪ್ಪಾಣಿ ತಾಲ್ಲೂಕಿನಲ್ಲಿ ಹರಿಯುವ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಭೋಜ-ಕಾರದಗಾ, ವೇದಗಂಗಾ ನದಿಗೆ ನಿರ್ಮಿಸಿರುವ ಭೋಜವಾಡಿ-ಕುನ್ನೂರ, ಭೋಜವಾಡಿ-ಗಜಬರವಾಡಿ, ಚಿಕ್ಕೋಡಿ ತಾಲ್ಲೂಕಿನಲ್ಲಿ ಹರಿಯುವ ಕೃಷ್ಣ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ-ಕಲ್ಲೋಳ, ಮಹಾರಾಷ್ಟ್ರ ಸಂಪರ್ಕಿಸುವ ರಾಜಾಪುರ-ಜೂಗೂಳ ಸೇತುವೆಗಳು ಜಲಾವೃತಗೊಂಡಿದ್ದು,ಜನರು ಪರ್ಯಾಯ ಮಾರ್ಗವಾಗಿ ಸಂಚರಿಸುತ್ತಿದ್ದಾರೆ. 


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ