Breaking News

ಮುಧೋಳ ತಾಲೂಕಿನ ವಿವಿಧ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ

Spread the love

ಬಾಗಲಕೋಟೆ: ಮುಧೋಳ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿ.ಪಂ ಸಿಇಒ ಗಜಾನನ ಬಾಲೆ ಭೇಟಿ ನೀಡಿ, ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳು, ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸೇವೆಗಳ ಅನುಷ್ಠಾನವನ್ನು ಸಮಗ್ರವಾಗಿ ಪರಿಶೀಲಿಸಿದರು.
ಆರಂಭದಲ್ಲಿ ಮಂಟೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಡಿಜಿಟಲ್ ಗ್ರಂಥಾಲಯವನ್ನು ವೀಕ್ಷಿಸಿ, ವಿದ್ಯಾರ್ಥಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ಅಭ್ಯರ್ಥಿಗಳು ಹಾಗೂ ಯುವಜನರು ಡಿಜಿಟಲ್ ಗ್ರಂಥಾಲಯದ ಸೌಲಭ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸಿಕೊಳ್ಳುವಂತೆ ಅರಿವು ಮೂಡಿಸಲು ಸೂಚಿಸಿದರು. ನಂತರ ಮಂಟೂರ ಕೆರೆಗೆ ಭೇಟಿ ನೀಡಿ, ಕೆರೆಯ ನಿರ್ವಹಣೆ, ನೀರಿನ ಸಂಗ್ರಹ ಸಾಮರ್ಥ್ಯ, ಸ್ವಚ್ಛತೆ ಹಾಗೂ ಸಂರಕ್ಷಣಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಕೆರೆಯ ಅಭಿವೃದ್ಧಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ನಂತರ ಮೆಳ್ಳಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಶೋರಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಪರಿಶೀಲಿಸಿ, ಪ್ರತಿಯೊಂದು ಮನೆಗೂ ಸುರಕ್ಷಿತ ಹಾಗೂ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೈಗೊಂಡಿರುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪೈಪ್‌ಲೈನ್ ಅಳವಡಿಕೆ, ನೀರಿನ ಸಂಗ್ರಹಣೆ ಹಾಗೂ ವಿತರಣಾ ವ್ಯವಸ್ಥೆಯಲ್ಲಿ ಯಾವುದೇ ಲೋಪ ಕಂಡುಬರದಂತೆ ವಿಶೇಷ ನಿಗಾ ವಹಿಸುವಂತೆ ತಿಳಿಸಿದರು.
ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಶೈಕ್ಷಣಿಕ ವಾತಾವರಣ, ವಸತಿ ವ್ಯವಸ್ಥೆ, ಆಹಾರದ ಗುಣಮಟ್ಟ, ಸ್ವಚ್ಛತೆ, ಕುಡಿಯುವ ನೀರು, ಶೌಚಗೃಹ ಹಾಗೂ ಇತರ ಮೂಲ ಸೌಲಭ್ಯಗಳನ್ನು ಪರಿಶೀಲಿಸಿದ ಸಿಇಒ ಅವರು ವಿದ್ಯಾರ್ಥಿಗಳ ಆರೋಗ್ಯ, ಸುರಕ್ಷತೆ ಹಾಗೂ ಕಲಿಕಾ ವಾತಾವರಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಶಾಲಾ ಆಡಳಿತಕ್ಕೆ ಸೂಚಿಸಿದರು.
ಬಳಿಕ ಹಲಗಲಿ ಗ್ರಾಮಕ್ಕೆ ಭೇಟಿ ನೀಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಭ್ಯವಿರುವ ವೈದ್ಯಕೀಯ ಸೇವೆಗಳು, ಔಷಧಿ ಲಭ್ಯತೆ, ವೈದ್ಯರು ಹಾಗೂ ಸಿಬ್ಬಂದಿಯ ಹಾಜರಾತಿ, ತಾಯಿ-ಮಗು ಆರೋಗ್ಯ ಸೇವೆಗಳು ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು. ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನಿರಂತರವಾಗಿ ಒದಗಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಅದೇ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಗಳು ಹಾಗೂ ಡಿಜಿಟಲ್ ಗ್ರಂಥಾಲಯವನ್ನು ವೀಕ್ಷಿಸಿ, ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು. ಗ್ರಾಮೀಣ ಪ್ರದೇಶಗಳ ಯುವಜನರು ಮತ್ತು ವಿದ್ಯಾರ್ಥಿಗಳು ಡಿಜಿಟಲ್ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
 ಸಾರ್ವಜನಿಕರಿಗೆ ಗುಣಮಟ್ಟದ ಸೇವೆಗಳನ್ನು ಸಮಯಕ್ಕೆ ಸರಿಯಾಗಿ ತಲುಪಿಸುವುದು ಮತ್ತು ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟವನ್ನು ಕಾಪಾಡಿಕೊಳ್ಳುವುದು ಅಽಕಾರಿಗಳ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು, ನಿಗದಿತ ಗಡುವಿನೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ಜನಸ್ನೇಹಿ ಆಡಳಿತವನ್ನು ಖಚಿತಪಡಿಸಬೇಕು ಎಂದು ಎಲ್ಲ ಇಲಾಖೆಗಳ ಅಽಕಾರಿಗಳಿಗೆ ನಿರ್ದೇಶನ ನೀಡಿದರು. ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಉತ್ತರದಾಯಿತ್ವ ಹಾಗೂ ಪರಿಣಾಮಕಾರಿ ಮೇಲ್ವಿಚಾರಣೆಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದರು.

Spread the love

About Laxminews 24x7

Check Also

ಮಹಾ’ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ – ಹಲವೆಡೆ ಭೂಕುಸಿತ, ಮುಂಬೈ-ಪುಣೆ ರೈಲ್ವೆ ಸಂಚಾರ ಸ್ಥಗಿತ

Spread the loveಮುಂಬೈ: ಮಹಾರಾಷ್ಟ್ರದಲ್ಲಿ  ಭೀಕರ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರತಿಷ್ಠಿತ ಏರಿಯಾಗಳೆಲ್ಲಾ ಜಲಾವೃತವಾಗಿದೆ. ಮಂಖುರ್ಡ್ ಪ್ರದೇಶದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ