Breaking News

ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ – ಬದುಕಿದ್ದೇ ಪವಾಡ

Spread the love

ಗಾಂಧಿನಗರ: ಸಿಂಹವೊಂದು ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಘಟನೆ ಗುಜರಾತ್‌ನ ಭಾವನಗರ ಜಿಲ್ಲೆಯ ಗರಾಜಿಯಾ ಗ್ರಾಮದಲ್ಲಿ ನಡೆದಿದೆ. ಮೇಲೆ ದಾಳಿ ಮಾಡಿದ ಘಟನೆ ನಡೆದಿದೆ.

ಸಿಂಹ ದಾಳಿ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. 46 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಸಿಂಹದ ಹಿಡಿತದಿಂದ ತಪ್ಪಿಸಿಕೊಳ್ಳಲು ಕಲುಭಾಯಿ ಒದ್ದಾಡುತ್ತಿರುವುದನ್ನು ನೋಡಬಹುದು. ಅವರ ಕಾಲುಗಳನ್ನು ಸಿಂಹ ಬಿಗಿಯಾಗಿ ಹಿಡಿದುಕೊಂಡಿತ್ತು. ಗ್ರಾಮಸ್ಥರು ಸಿಂಹವನ್ನು ಓಡಿಸಲು ಜೋರಾಗಿ ಕಿರುಚಾಡುತ್ತಿರುವುದು ಕೇಳಿಸುತ್ತದೆ. ಕೆಲವರು ಸಿಂಹದ ಮೇಲೆ ಕಲ್ಲುಗಳನ್ನು ಎಸೆದಿದ್ದಾರೆ.

ಕಲುಭಾಯ್ ಬೋಘಾಯ್ ಪರ್ಮಾರ್ ಮನೆಯ ಬಳಿ ಹಸುಗಳಿಗೆ ಮೇವು ಹಾಕಲು ಹೋಗಿದ್ದಾಗ ಸಿಂಹ ದಾಳಿ ನಡೆಸಿದೆ. ಸುಮಾರು 30 ನಿಮಿಷಗಳ ಬಳಿಕ ಸಿಂಹ ಆತನನ್ನು ಬಿಟ್ಟು, ಕಟ್ಟಿಹಾಕಿದ್ದ ಹಸುವಿನ ಕಡೆಗೆ ತೆರಳಿದೆ. ಬಳಿಕ ಆತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾಳಿಯ ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಅಧಿಕಾರಿಗಳು ತಡವಾಗಿ ಬಂದಿದ್ದಾರೆ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಅರಣ್ಯ ಅಧಿಕಾರಿಗಳು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ಯಾಕ್‌ ಮಾಡದ ಖಾದ್ಯ ತೈಲ ಮಾರಾಟಕ್ಕೆ ನಿಷೇಧ – ನಿಯಮ ಉಲ್ಲಂಘಿಸಿದ್ರೆ 7 ವರ್ಷ ಜೈಲು

Spread the loveಮುಂಬೈ: ಮಹಾರಾಷ್ಟ್ರದಲ್ಲಿ ಸಡಿಲ (ಪ್ಯಾಕ್ ಮಾಡದ) ಖಾದ್ಯ ತೈಲ ಮಾರಾಟ ಮಾಡುವುದನ್ನು ರಾಜ್ಯ ಆಹಾರ ಮತ್ತು ಔಷಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ