Breaking News

ಧಾರಾಕಾರ ಮಳೆಗೆ ನಡುಗಿದ ಮಲೆನಾಡು, ಕರಾವಳಿ- ಮಂಗಳವಾರ ಎಲ್ಲೆಲ್ಲಿ ರಜೆ?

Spread the love

ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮುಂದುವರಿದಿರುವ ಭಾರೀ ಮಳೆ (Heavy Rain) ಮತ್ತು ಬಿರುಗಾಳಿಯ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳವಾರ ವಿವಿಧ ಜಿಲ್ಲೆಗಳ ಹಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ (Holiday) ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.

ಉತ್ತರ ಕನ್ನಡ
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ 5 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲೂಕಿನಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಈ ರಜೆ ಆದೇಶವನ್ನು ಹೊರಡಿಸಿದ್ದಾರೆ.

ಶಿವಮೊಗ್ಗ
ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲೂ ವರುಣನ ಆರ್ಭಟ ಜೋರಾಗಿದ್ದು ಹೊಸನಗರ, ತೀರ್ಥಹಳ್ಳಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕಮಗಳೂರು

ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕಳಸ ಮತ್ತು ಕೊಪ್ಪ ತಾಲೂಕಿನಲ್ಲಿ ಅಂಗನವಾಡಿಯಿಂದ ಹಿಡಿದು ಪ್ರೌಢಶಾಲೆಯವರೆಗಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಬೆಳಗಾವಿ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಬಿಟ್ಟೂಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.


Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ