Breaking News

ಹಾಸನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – ಬೇಲೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ

Spread the love

ಹಾಸನ: ಜಿಲ್ಲೆಯ ಸಕಲೇಶಪುರ, ಬೇಲೂರು, ಆಲೂರು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಬೇಲೂರು (Belur) ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಬೇಲೂರು ತಾಲೂಕಿನ ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು ಹಾಗೂ ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶ ಹೊರಡಿಸಿದ್ದಾರೆ.

ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಸಕಲೇಶಪುರ ತಾಲೂಕಿನಲ್ಲಿಯೂ ಧಾರಾಕಾರವಾಗಿ ಮಳೆಯಾಗುತ್ತಿದ್ದು ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜಿಗೆ ರಜೆ ಘೋಷಿಸಿ ತಹಶೀಲ್ದಾರ್ ಸುಪ್ರಿತಾ ಆದೇಶ ಹೊರಡಿದ್ದಾರೆ.


Spread the love

About Laxminews 24x7

Check Also

ಮಹಾ’ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ – ಹಲವೆಡೆ ಭೂಕುಸಿತ, ಮುಂಬೈ-ಪುಣೆ ರೈಲ್ವೆ ಸಂಚಾರ ಸ್ಥಗಿತ

Spread the loveಮುಂಬೈ: ಮಹಾರಾಷ್ಟ್ರದಲ್ಲಿ  ಭೀಕರ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರತಿಷ್ಠಿತ ಏರಿಯಾಗಳೆಲ್ಲಾ ಜಲಾವೃತವಾಗಿದೆ. ಮಂಖುರ್ಡ್ ಪ್ರದೇಶದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ