Breaking News

ಕೊಲ್ಲೂರು ಮೂಕಾಂಬಿಕೆ ಸನ್ನಿಧಿಯಲ್ಲಿ ಭಕ್ತೆಯ ಹಣ ಕಳ್ಳತನ – ಮೂವರು ಕಳ್ಳಿಯರ ಬಂಧನ

Spread the love

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ಹಣ ಕಳ್ಳತನ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಕೊಲ್ಲೂರು ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ನೇತ್ರಾವತಿ, ಶಾರದಾ ಹಾಗೂ ದುರ್ಗಮ್ಮ ಬಂಧಿತ ಆರೋಪಿಗಳು. ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ನಿಮಿಶಾ ಎಂಬ ಭಕ್ತೆಯ ವ್ಯಾನಿಟಿ ಬ್ಯಾಗ್‌ನಲ್ಲಿದ್ದ 80 ಸಾವಿರ ರೂ. ಹಣ ಕಳ್ಳತನವಾಗಿತ್ತು. ಘಟನೆ ಬಳಿಕ ದೇವಸ್ಥಾನದ ಆವರಣದಲ್ಲಿ ಎಷ್ಟೇ ಹುಡುಕಾಟ ನಡೆಸಿದರೂ ಹಣ ಪತ್ತೆಯಾಗಿರಲಿಲ್ಲ.

ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ದೇವಸ್ಥಾನದ ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಘಟನೆ ನಡೆದ ಸ್ಥಳದಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದ ಛಾಯಾಚಿತ್ರಗಳ ಆಧಾರದ ಮೇಲೆ ತನಿಖೆ ನಡೆಸಿದರು.

ತನಿಖೆಯಲ್ಲಿ ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದ ಮೂವರು ಮಹಿಳೆಯರ ಸುಳಿವು ಪತ್ತೆಯಾಗಿತ್ತು. ಕಳ್ಳತನ ನಡೆದ 24 ಗಂಟೆಯೊಳಗೆ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


Spread the love

About Laxminews 24x7

Check Also

ಮಹಾ’ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆ – ಹಲವೆಡೆ ಭೂಕುಸಿತ, ಮುಂಬೈ-ಪುಣೆ ರೈಲ್ವೆ ಸಂಚಾರ ಸ್ಥಗಿತ

Spread the loveಮುಂಬೈ: ಮಹಾರಾಷ್ಟ್ರದಲ್ಲಿ  ಭೀಕರ ಮಳೆಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಪ್ರತಿಷ್ಠಿತ ಏರಿಯಾಗಳೆಲ್ಲಾ ಜಲಾವೃತವಾಗಿದೆ. ಮಂಖುರ್ಡ್ ಪ್ರದೇಶದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ