Breaking News

ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್‌ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ಬೆಂಗಳೂರು: 20 ವರ್ಷದ ವಿದ್ಯಾರ್ಥಿನಿಯೊಬ್ಬಳು  ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನ ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು ಮೃತದೇಹವನ್ನ ಹೊರಗೆ ತೆಗೆದಿದ್ದಾರೆ.

ಪ್ರೀತಿ ವಿಚಾರಕ್ಕೆ ಆತ್ಮಹತ್ಯೆ ಶಂಕೆ
ಮೇಲ್ನೋಟಕ್ಕೆ, ಪ್ರೀತಿ ವಿಚಾರಕ್ಕೆ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ ಸಾಕಾಗಿದೆʼ ಅಂತ ಗೆಳೆಯನಿಗೆ ಮೆಸೇಜ್‌ ಮಾಡಿದ್ದಾಳೆ. ಬಳಿಕ ಫೋನ್‌ ಸ್ವಿಚ್‌ಆಫ್‌ ಮಾಡಿಕೊಂಡಿದ್ದಾಳೆ. ಸೋಮವಾರ (ಜು.6) ರಂದು ಸ್ಯಾಂಕಿ ಕೆರೆ ಬಳಿ ಬಂದಿದ್ದ ತೇಜು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇಂದು ಬೆಳಗಿನ ಜಾವ ಮೃತದೇಹ ಪತ್ತೆಯಾದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪರಿಶೀಲನೆ ನಡೆಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ