Breaking News

ಬೆಳಗಾವಿಯ ಆರ್‌ಟಿಓ ಸರ್ಕಲ್ ಬಳಿ ಆಟೋ ಮೇಲೆ ಬಿದ್ದ ಮರ

Spread the love

ಬೆಳಗಾವಿ: ಬೆಳಗಾವಿ ನಗರದ ಆರ್ ಟಿ ಓ ವೃತ್ತದ ಬಳಿ ಭಾರಿ ಗಾತ್ರದ ನೀಲಗಿರಿ ಮರವೊಂದು ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಆಟೋ ಮೇಲೆ ಧರೆಗುರುಳಿದ ಘಟನೆ ನಡೆದಿದೆ.

ಆಟೋ ಮೇಲೆ ಮರ ಬಿದಿದ್ದರಿಂದ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಭಾರಿ ಗಾತ್ರದ ಮರ ಮತ್ತು ಅದರ ಕೊಂಬೆಗಳು ರಸ್ತೆಗೆ ಅಡ್ಡಲಾಗಿ ಬಿದ್ದಿರುವುದರಿಂದ ಈ ಭಾಗದಲ್ಲಿ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ಸದ್ಯಕ್ಕೆ ವರದಿಯಾಗಿಲ್ಲ.

ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು, ಮರವನ್ನು ತೆರವುಗೊಳಿಸಲು ತೆರವುಗೋಳಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ