Breaking News

ಕಮಲ್ ಹಾಸನ್ ಕನ್ನಡ ಹೇಳಿಕೆ ವಿವಾದ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ

Spread the love

ಬೆಂಗಳೂರು: ಕನ್ನಡ ಭಾಷೆ ಕುರಿತು ನಟ ಕಮಲ್ ಹಾಸನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ  ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ʼತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿʼ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಈ ಸಂಬಂಧ ಮೊದಲು ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ಆದರೆ ಇತ್ತೀಚೆಗೆ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆ, ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ