Breaking News

ಮದ್ವೆಯಾದ ಐದೇ ತಿಂಗಳಿಗೆ ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿ

Spread the love

ಹುಬ್ಬಳ್ಳಿ: ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಪತಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ  ಹೊರವಲಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ.

ಮೂಲತಃ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಹಳೆಮನಿ (19) ಕೊಲೆಯಾದ ಪತ್ನಿ. ಶಿವರಾಜ್ ಕೊಲೆ ಮಾಡಿದ ಪತಿ ಎನ್ನಲಾಗಿದೆ.

ಮಾಹಿತಿಯ ಪ್ರಕಾರ, ಕಳೆದ ಫೆಬ್ರವರಿಯಲ್ಲಿ ವಿವಾಹವಾಗಿದ್ದ ಈ ದಂಪತಿ ತಾರಿಹಾಳ ಗ್ರಾಮದಲ್ಲಿ ವಾಸವಾಗಿದ್ದರು. ಇಂದು ಬೆಳಿಗ್ಗೆ ಗಂಡ-ಹೆಂಡತಿ ನಡುವಿನ ವಾಗ್ವಾದ ಶುರುವಾಗಿತ್ತು. ಬಳಿಕ ಗಲಾಟೆ ತಾರಕಕ್ಕೇರಿದ್ದು, ಪತಿ ಶಿವರಾಜ್ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡ ನಾಗರತ್ನ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಎಸ್‌ಪಿ ಗುಂಜನ್ ಆರ್ಯ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಕೊಲೆಗೆ ನಿಖರ ಕಾರಣ ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ