ಬೆಂಗಳೂರು: ಕುಮಾರಸ್ವಾಮಿ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನಲೆಯಲ್ಲಿ ಮಾಜಿ ಸಿಎಂ ನಾಳೆ ಸಾರ್ವಜನಿಕರೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಒಂದು ವರ್ಷದ ಬಿಜೆಪಿ ಸರ್ಕಾರದ ಆಡಳಿತ , ಕಾರ್ಯವೈಖರಿ ಬಗ್ಗೆ ಸಂವಾದ ನಡೆಸಲಿದ್ದು, ಕುಮಾರಸ್ವಾಮಿ ಸಾರ್ವಜನಿಕರ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಪ್ರಸ್ತುತ ಕೊರೋನಾ ಪರಿಸ್ಥಿತಿ ಯನ್ನು ಸರ್ಕಾರ ನಿಭಾಯಿಸುತ್ತಿರುವ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.
ಮಧ್ಯರಾತ್ರಿ ನಡು ರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ..!
ಈಗಾಗಲೇ ಕುಮಾರಸ್ವಾಮಿಗೆ ಮೋಸ ಮಾಡಿ ಒಂದು ವರ್ಷ ಎಂಬ ಹೆಸರಲ್ಲಿ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕರ ಜೊತೆ ವಿಡಿಯೋ ಸಂವಾದದ ಮೂಲಕ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ.