Breaking News

ಲಾರಿ, ಕ್ರೂಸರ್ ನಡುವೆ ಭೀಕರ ಅಪಘಾತ – ಸ್ಥಳದಲ್ಲೇ 6 ಮಂದಿ ದುರ್ಮರಣ

Spread the love

ಕಾರವಾರ: ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ  ನಡೆದಿದೆ.

ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ ಧಾರವಾಡದ ಬಸವರಾಜ್, ಮಂಜುನಾಥ್ ಚುಲ್ಲಕ್ಕಿ, ಅಭಿಷೇಕ್ ಮಲ್ಲೇಶ್ ಮಡಬಾವಿ, ಅಕ್ಷಯ್ ಮಲ್ಲಣ್ಣನವರ್ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಗುರುತು ಪತ್ತೆಯಾಗಬೇಕಿದೆ.

ಮೃತರನ್ನ ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ