Breaking News

ಕೊಡಗಿನಲ್ಲಿ ಬಿರುಸು ಪಡೆದ ಮಳೆ – ಒಂದೇ ದಿನ ಹಾರಂಗಿ ಜಲಾಶಯಕ್ಕೆ ಹರಿದು ಬಂತು 1.5 ಟಿಎಂಸಿ ನೀರು

Spread the love

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ಮುಂಗಾರು ಆರ್ಭಟ ಮುಂದುವರಿದಿದೆ. ಧಾರಾಕಾರ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಭಾರೀ ಪ್ರಮಾಣದ ನೀರು ಹರಿದು ಬರುತ್ತಿದೆ. ಒಂದೇ ದಿನದಲ್ಲಿ ಸುಮಾರು 1.5 ಟಿಎಂಸಿ ನೀರು (17,361 ಕ್ಯೂಸೆಕ್‌) ಸಂಗ್ರಹವಾಗಿರುವುದು ಜಲಾಶಯದ ನೀರಿನ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಿದೆ.

ಮಡಿಕೇರಿ , ಗಾಳಿಬೀಡು ಹಾಗೂ ಕಾಲೂರು ಭಾಗಗಳಲ್ಲಿ ಕಳೆದ 24 ಗಂಟೆಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯದ ಒಳಹರಿವು ಹೆಚ್ಚಾಗಿದೆ. ಇಂದು ಕೂಡ ಜಲಾಶಯಕ್ಕೆ 3,665 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಒಂದೇ ದಿನದಲ್ಲಿ ಸುಮಾರು 1.5 ಟಿಎಂಸಿ ನೀರು ಸಂಗ್ರಹವಾಗಿದೆ.

ಇದರಿಂದ ಜಲಾಶಯದ ನೀರಿನ ಮಟ್ಟದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಹವಾಮಾನ ಇಲಾಖೆ ಇನ್ನೂ ಕೆಲ ದಿನಗಳ ಕಾಲ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ಹಾರಂಗಿ ಜಲಾಶಯಕ್ಕೆ ಒಳಹರಿವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಜಲಾಶಯದ ನೀರಿನ ಮಟ್ಟವನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯವಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ. ಕೊಡಗಿನಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ನದಿ-ತೊರೆಗಳ ತೀರದ ನಿವಾಸಿಗಳು ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಮನವಿ ಮಾಡಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ