Breaking News

ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರು – ಮುಂದಿನ 3 ದಿನ ಕರಾವಳಿ, ಮಲೆನಾಡು ಭಾಗದಲ್ಲಿ ಭಾರೀ ಮಳೆ

Spread the love

ಬೆಂಗಳೂರು: ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ  ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆ  ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ಮಾಹಿತಿ ನೀಡಿದ್ದು, ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಮಡಿಕೇರಿ ಮತ್ತು ಬೆಳಗಾವಿ ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಈ ಭಾಗಗಳಿಗೆ ಇನ್ನೂ 2 ದಿನಗಳ ಕಾಲ ಯಲ್ಲೋ ಅಲಟ್೯ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

3 ದಿನಗಳ ಬಳಿಕ ಈ ಭಾಗಗಳಲ್ಲಿ ಹಂತ-ಹಂತವಾಗಿ ಮಳೆ ಕಡಿಮೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ರಾಯಚೂರು, ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಇನ್ನೂ 10 ದಿನಗಳ ವರೆಗೂ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ.

ಈ ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆ, ಮಳೆ ಬಂದರೂ ಕೂಡ ಮಳೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ