Breaking News

ಧಗ ಧಗ ಧಗ – ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಪೆಟ್ರೋಲ್ ಟ್ಯಾಂಕರ್ ಲಾರಿ

Spread the love

ಚಿಕ್ಕಬಳ್ಳಾಪುರ: ಅತಿ ವೇಗವಾಗಿ ಬಂದ ಪೆಟ್ರೋಲ್‌ ಟ್ಯಾಂಕರ್‌ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಬಳಿ ನಡೆದಿದೆ.

ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಹೇಳಲಾಗ್ತಿದೆ. ಪೆಟ್ರೋಲ್‌ ಟ್ಯಾಂಕರ್‌ ಲಾರಿ ಧಗಧಗನೆ ಹೊತ್ತಿ ಉರಿಯುತ್ತಿದ್ದಂತೆ, ಅಗ್ನಿ ಜ್ವಾಲೆ ಪಕ್ಕದಲ್ಲಿ ರಿವರ್ಸ್‌ ತೆಗೆಯುತ್ತಿದ್ದ ಹಾಲಿನ ಟ್ಯಾಂಕರ್‌ಗೂ ವ್ಯಾಪಿಸಿದೆ.

ಕ್ಷಣಾರ್ಧದಲ್ಲಿ ಲಾರಿ ಹೊತ್ತಿ ಉರಿದಿದ್ದು, ಚಾಲಕರು ಸಮಯಕ್ಕೆ ಸರಿಯಾಗಿ ಲಾರಿಯಿಂದ ಹಾರಿ ಪ್ರಾಣ ಉಳಿಸಿಕೊಂಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎರಡೂ ಲಾರಿಗಳು ಬಹುತೇಕ ಸುಟ್ಟು ಭಸ್ಮ ಆಗಿವೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ