Breaking News

ʻಮಹಾʼ ಮಳೆಗೆ ಕೊಚ್ಚಿ ಹೋದ 3,000 ಸಿಲಿಂಡರ್‌

Spread the love

ಮುಂಬೈ: ಭಾರೀ ಮಳೆಯಿಂದಾಗಿ  ಮಹಾರಾಷ್ಟ್ರದ  ರಾಯಗಢದ HPCL ಬಾಟ್ಲಿಂಗ್ ಸ್ಥಾವರಕ್ಕೆ ಪಾತಾಳಗಂಗಾ ನದಿ ನೀರು ನುಗ್ಗಿ 3,000 LPG ಸಿಲಿಂಡರ್‌ಗಳು (LPG Cylinders) ತೇಲಿ ಹೋಗಿವೆ. ಸಿಲಿಂಡರ್‌ಗಳು ತೇಲಿ ಹೋಗುವ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. LPG ಸಿಲಿಂಡರ್‌ ಅಭಾವದ ನಡುವೆ ಈ ಘಟನೆ ಸಂಭವಿಸಿದ್ದು, ತೀವ್ರ ಆಘಾತಕ್ಕೆ ಕಾರಣವಾಗಿದೆ.

ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ HPCL ನ ಪಾತಾಳಗಂಗಾ LPG ಬಾಟ್ಲಿಂಗ್ ಸ್ಥಾವರದಲ್ಲಿ ಈ ಘಟನೆ ನಡೆದಿದೆ. ಅವುಗಳಲ್ಲಿ ಕೆಲವು ಸಿಲಿಂಡರ್‌ಗಳಲ್ಲಿ ಗ್ಯಾಸ್‌ ತುಂಬಿವೆ, ಕೆಲವು ಖಾಲಿಯಾಗಿದ್ದವು ಎನ್ನಲಾಗಿದೆ. ನದಿಯ ಉದ್ದಕ್ಕೂ ತೇಲುತ್ತಿರುವ ಸಿಲಿಂಡರ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜನರ ಗಮನ ಸೆಳೆದಿದೆ. ಘಟನೆಯ ನಂತರ, ಜಿಲ್ಲಾಡಳಿತ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಿದೆ.

ರಾಯಗಡ ಜಿಲ್ಲಾಧಿಕಾರಿ ಕಿಶನ್ ಜವಾಲೆ ಅವರು, ನದಿಯಲ್ಲಿ ಕಂಡುಬರುವ ಅಥವಾ ದಡಕ್ಕೆ ಬರುವ ಸಿಲಿಂಡರ್ ಯಾವ ಸ್ಥಿತಿಯಲ್ಲಿವೆ ಎಂಬ ಬಗ್ಗೆ ಮಾಹಿತಿ ಇಲ್ಲ. ಇದರಿಂದಾಗಿ ಅವುಗಳ ಬಳಿಗೆ ಹೋಗದಂತೆ ಜನರಿಗೆ ಮನವಿ ಮಾಡಿದ್ದಾರೆ. ಯಾವುದೇ ಸಿಲಿಂಡರ್‌ನ್ನು ಎತ್ತಿಕೊಳ್ಳಬಾರದು, ಸ್ಥಳಾಂತರಿಸಬಾರದು ಅಥವಾ ಮನೆಗೆ ತೆಗೆದುಕೊಂಡು ಹೋಗಬಾರದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಯಾವುದೇ ಸಿಲಿಂಡರ್ ಕಾಣಿಸಿದರೂ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅದರಿಂದ ಸುರಕ್ಷಿತ ಅಂತರವನ್ನು ಕಾಯ್ದುಕೊಳ್ಳಬೇಕು. ಅವುಗಳನ್ನು ಮುಟ್ಟುವುದರಿಂದ ಜೀವಕ್ಕೆ ಅಪಾಯ ಆಗುವ ಸಾಧ್ಯತೆ ಇದೆ ಎಂದು ಸಾರ್ವಜನಿಕರಿಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಮತ್ತು ನಿವಾಸಿಗಳು ಜಾಗರೂಕರಾಗಿರಲು ಪದೇ ಪದೇ ಒತ್ತಾಯಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ