Breaking News

ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಗೃಹಲಕ್ಷ್ಮಿ ವಿರುದ್ಧದ ಆರೋಪಗಳಲ್ಲಿ ಹುರುಳಿಲ್ಲ

Spread the love

ಬೆಳಗಾವಿ: ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ವಿಶ್ವದಲ್ಲೇ ಮಾದರಿಯಾಗಿದೆ. ಎನ್‌ಡಿಎ ಆಡಳಿತದ ಕೆಲವು ರಾಜ್ಯಗಳೂ ಇದೇ ಮಾದರಿಯ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಕೇಂದ್ರ ಸರ್ಕಾರದ ಮಟ್ಟದಲ್ಲೂ ಗೃಹಲಕ್ಷ್ಮಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹೀಗಿರುವಾಗ ನಮ್ಮ ಈ ಯೋಜನೆ ಕುರಿತು ರಾಜ್ಯದಲ್ಲಿ ವಿಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮುಖ್ಯಮಂತ್ರಿಯಾದ ಬಳಿಕ ಡಿ.ಕೆ.ಶಿವಕುಮಾರ ಮೊದಲ ಸಲ ಬೆಳಗಾವಿಗೆ ಬಂದಿದ್ದಾರೆ. ಹೀಗಾಗಿ ಸಾಕಷ್ಟು ನಿರೀಕ್ಷೆಗಳು ಹುಟ್ಟಿಕೊಂಡಿವೆ. ಬೆಳಗಾವಿ ರಾಜ್ಯದ ಅತಿದೊಡ್ಡ ಜಿಲ್ಲೆ. ಕಾಂಗ್ರೆಸ್‌ನ 11 ಶಾಸಕರು ಆಯ್ಕೆಯಾಗಿದ್ದೇವೆ. ಹೀಗಾಗಿ ಜಿಲ್ಲೆಗೆ ಇನ್ನೂ ಎರಡು ಸಚಿವ ಸ್ಥಾನಗಳು ದೊರೆಯುವ ನಿರೀಕ್ಷೆಯಿದೆ. ಈ ಕುರಿತು ಪಕ್ಷದ ನಾಯಕತ್ವ ಸೂಕ್ತ ನಿರ್ಧಾರ ಕೈಗೊಳ್ಳಲಿದೆ  ಎಂದರು.
ಬೆಳಗಾವಿ ಕರ್ನಾಟಕದ ಎರಡನೇ ರಾಜಧಾನಿ.  ಗೋವಾ ಹಾಗೂ ಮುಂಬೈಗೆ ಸಮೀಪದಲ್ಲಿರುವ ಕಾರಣ ಕೈಗಾರಿಕಾ ಹೂಡಿಕೆಗೆ ಅತ್ಯಂತ ಸೂಕ್ತ ಪ್ರದೇಶ. ಹೆಚ್ಚಿನ ಕೈಗಾರಿಕೆಗಳು ಸ್ಥಾಪನೆಯಾದರೆ ಉದ್ಯೋಗಾವಕಾಶಗಳು ಹೆಚ್ಚಲಿವೆ.  ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ. ಸದ್ಯಕ್ಕೆ ಜಿಲ್ಲಾ ವಿಭಜನೆ ವಿಚಾರ ಅಪ್ರಸ್ತುತವಾಗಿದೆ. ಮುಖ್ಯಮಂತ್ರಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆ ಅಭಿವೃದ್ಧಿ ವಿಚಾರಗಳಿಗೆ ಆದ್ಯತೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಜಿಲ್ಲೆ ವಿಭಜನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.

Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ