Breaking News

ಪತಿಗೆ ಬೇರೊಬ್ಬಳ ಜೊತೆ ಅನೈತಿಕ ಸಂಬಂಧ ಆರೋಪ – ಬೇಸತ್ತು ಆತ್ಮಹತ್ಯೆಗೆ ಶರಣಾದ ಪತ್ನಿ

Spread the love

ಹಾವೇರಿ: ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದಕ್ಕೆ ಬೇಸತ್ತು ಮಹಿಳೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ರಾಣೇಬೆನ್ನೂರು ನಗರದ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ.

ಸೀಮಾ ಭಾನು ಕಂಬಳಿ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿ ಅಬ್ರಾರ ಕಂಬಳಿ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಹೊಂದಿದ್ದ. ಅಲ್ಲದೇ ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣಿಗಾಗಿ ಮಹಿಳೆಗೆ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಕಿರುಕುಳ ತಾಳದೆ ಸೀಮಾ 10 ದಿನದ ಹಿಂದೆ ವಿಷ ಸೇವಿಸಿದ್ದಳು. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು (ಜು.10) ಸಾವನ್ನಪ್ಪಿದ್ದಾಳೆ.

ಕಳೆದ ಮೂರು ವರ್ಷಗಳ ಹಿಂದೆ ಅದ್ದೂರಿಯಾಗಿ ಸೀಮಾ ಭಾನು ಕಂಬಳಿಯನ್ನು ಅಬ್ರಾರನಿಗೆ ಮದುವೆ ಮಾಡಿಕೊಡಲಾಗಿತ್ತು. ಆಗಿಂದಲೂ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.

ಈ ಸಂಬಂಧ 6 ಜನರ ವಿರುದ್ಧ ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸುವಂತೆ ಮಹಿಳೆಯ ಪೋಷಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ