Breaking News

40 ವರ್ಷಗಳ ಬಳಿಕ ನ್ಯೂಜಿಲೆಂಡ್‌ಗೆ ಭಾರತದ ಪ್ರಧಾನಿ ಭೇಟಿ

Spread the love

ವೆಲ್ಲಿಂಗ್ಟನ್: ಇಂಡೋನೇಷ್ಯಾ, ಆಸ್ಟ್ರೇಲಿಯಾ ಬಳಿಕ ಪ್ರಧಾನಿ ನರೇಂದ್ರ ಮೋದಿ ನ್ಯೂಜಿಲೆಂಡ್‌ಗೆ ಭೇಟಿ ನೀಡಿದ್ದಾರೆ. ಮೋದಿ ಆಗಮನದ ಹಿನ್ನೆಲೆಯಲ್ಲಿ ಆಕ್ಲೆಂಡ್‌ನ ಸ್ಕೈಟವರ್‌ನಲ್ಲಿ ತ್ರಿವರ್ಣಧ್ವಜದ ದೀಪಬೆಳಗಿಸಿ ವಿಶೇಷ ಸ್ವಾಗತ ಕೋರಲಾಗಿದೆ.

40 ವರ್ಷಗಳಲ್ಲೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ನ್ಯೂಜಿಲೆಂಡ್‌ಗೆ ಭೇಟಿ ನೀಡಿದ್ದು, ಪ್ರಧಾನಿ ಕ್ರಿಸ್ಟೋಫರ್ ಲಕ್ಸುನ್ ಬರಮಾಡಿಕೊಂಡರು. 2 ದೇಶಗಳ ಮಧ್ಯೆ ಮುಕ್ತವ್ಯಾಪಾರ ಒಪ್ಪಂದ ಏರ್ಪಡಲಿದೆ.

ಈ ಭೇಟಿ ಐತಿಹಾಸಿಕವಾಗಿದ್ದು, ನಾಲ್ಕು ದಶಕಗಳಲ್ಲಿ ನ್ಯೂಜಿಲೆಂಡ್‌ಗೆ ಪ್ರಧಾನಿಯವರ ಮೊದಲ ಭೇಟಿ ಇದಾಗಿದೆ. ಪ್ರಧಾನಿ ಲಕ್ಸನ್ ಅವರೊಂದಿಗೆ ಮಾತುಕತೆ ನಡೆಸಲು ಮತ್ತು ಭಾರತ-ನ್ಯೂಜಿಲೆಂಡ್ ಸ್ನೇಹದ ಸಂಪೂರ್ಣ ಶ್ರೇಣಿಯ ಬಗ್ಗೆ ಚರ್ಚಿಸಲು ನಾನು ಎದುರು ನೋಡುತ್ತಿದ್ದೇನೆ. ನಾಳೆ ಆಕ್ಲೆಂಡ್‌ನಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದೇನೆ ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ

Spread the loveಬೆಂಗಳೂರು: ಶಾಶ್ವತ ನಿವಾಸ ಪ್ರಮಾಣ ಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು? ಆ ರೀತಿ ನಿಯಮ ಇದ್ಯಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ