Breaking News

ಹಿಂದೂ ಮಹಿಳೆಯರೇ ಟಾರ್ಗೆಟ್ – ಜಿಮ್ ಟ್ರೇನರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ

Spread the love

ದಾವಣಗೆರೆ: ಇಲ್ಲಿನ ಸರಸ್ವತಿ ನಗರದಲ್ಲಿರುವ ಫಿಟ್‌ನೆಸ್ ಕ್ಲಬ್‌ವೊಂದು ಇದೀಗ ವಿವಾದದ ಕೇಂದ್ರಬಿಂದುವಾಗಿದ್ದು, ಜಿಮ್ ಟ್ರೇನರ್  ಜಿಮ್‌ಗೆ ಬರುವ ಹಿಂದೂ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಜಿಮ್ ಟ್ರೇನರ್‌ನನ್ನು ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಪ್ರೊಫೆಸರ್‌ಗಳು, ಅಧಿಕಾರಿಗಳು, ವೈದ್ಯರು, ಇಂಜಿನಿಯರ್‌ಗಳು ಹಾಗೂ ಪ್ರತಿಷ್ಠಿತ ಮನೆತನದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಪುಸಲಾಯಿಸಿ ಲೈಂಗಿಕವಾಗಿ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ರೀಲ್ಸ್ ಮಾಡಿ ಬುಟ್ಟಿಗೆ ಬೀಳಿಸಿಕೊಳ್ಳೋದು, ಡ್ರೆಸ್ಸಿಂಗ್ ರೂಮ್‌ಗಳಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಸಿ ಖಾಸಗಿ ವಿಡಿಯೋ ಹಾಗೂ ಫೋಟೋ ಸೆರೆಹಿಡಿದು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ಹಿಂದೂ ಸಂಘಟನೆಗಳ ಮುಖಂಡರು ಹೊರಹಾಕಿದ್ದಾರೆ. ಈ ಕೃತ್ಯದ ಕೆಲವು ದೃಶ್ಯಗಳು ಸಿಸಿಟಿವಿಯಲ್ಲಿಯೂ ಸೆರೆಯಾಗಿವೆ ಎನ್ನಲಾಗಿದ್ದು, ಕೆಲ ಫೋಟೋಗಳು ಸಹ ವೈರಲ್ ಆಗಿವೆ.

ಬ್ಲ್ಯಾಕ್‌ಮೇಲ್‌ಗೆ ಹೆದರಿ ಪ್ರತಿಷ್ಠಿತ ಕುಟುಂಬದ ಮಹಿಳೆಯೋರ್ವರು ಆತ್ಮಹತ್ಯೆಗೂ ಯತ್ನಿಸಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಜಿಮ್ ಟ್ರೇನರ್ ಇಸ್ಮಾಯಿಲ್‌ನನ್ನು ಗಡಿಪಾರು ಮಾಡುವಂತೆ ಹಿಂದೂ ಮುಖಂಡರು ಆಗ್ರಹಿಸಿದ್ದಾರೆ. ನೈತಿಕ ಪೊಲೀಸ್‌ಗಿರಿ ಮಾಡಿದ್ರೆ ನಿಮ್ಮ ಮೇಲೂ ಕ್ರಮ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಿಂದೂ ಮುಖಂಡರಿಗೆ ವಾರ್ನಿಂಗ್ ಕೊಟ್ಟಿರೋದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ