ಬೆಂಗಳೂರು: ಜು.12ರ ಭಾನುವಾರದಂದು ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆ ಮಾಹಿತಿ ನೀಡಿದೆ.
ರಾಜ್ಯಾದ್ಯಂತ ಇರುವ ಎಲ್ಲಾ ಉಪನೋಂದಣಿ ಕಚೇರಿಗಳು ಇದೇ ಭಾನುವಾರ (ಜು.12) ಎಂದಿನಂತೆ ಕರ್ತವ್ಯ ನಿರ್ವಹಿಸಲಿವೆ. ಸಾರ್ವಜನಿಕ ರಜಾ ದಿನವಾಗಿದ್ದರೂ ಸಹ, ಸಾರ್ವಜನಿಕರ ಅನುಕೂಲಕ್ಕಾಗಿ ಮತ್ತು ಇಲಾಖೆಯ ಕಾರ್ಯದೊತ್ತಡ ನಿವಾರಣೆಗಾಗಿ ಎಂದಿನಂತೆ ತೆರೆದಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿವೆ.
ಈ ದಿನದಂದು ಸಾರ್ವಜನಿಕರು ಎಂದಿನಂತೆ ಆಸ್ತಿ ನೋಂದಣಿ, ಮುದ್ರಾಂಕ ಖರೀದಿ ಹಾಗೂ ಇಲಾಖೆಗೆ ಸಂಬಂಧಿಸಿದ ಇತರ ಸೇವೆಗಳನ್ನು ಪಡೆದುಕೊಳ್ಳಬಹುದಾಗಿದೆ. ಸಾರ್ವಜನಿಕರು ಈ ವಿಶೇಷ ಅವಕಾಶದ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮತ್ತು ಮುದ್ರಾಂಕಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.
Laxmi News 24×7