Breaking News

ಮೀಟರ್‌ ಬಡ್ಡಿ ಟಾರ್ಚರ್‌ಗೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ

Spread the love

ಬೆಂಗಳೂರು: ಮೀಟರ್‌ ಬಡ್ಡಿ ಕಿರುಕುಳ ಮತ್ತು ಸಾಲದ ಬಾಧೆಯಿಂದ ಬೇಸತ್ತು ಆಟೋ ಚಾಲಕನೊಬ್ಬ  ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.

ಜೀ ಯೌಸುಫ್ ಜಮಾಲ್‌ದ್ದಿನ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಈ ಘಟನೆ ನಡೆದಿದೆ.

ಆತ್ಮಹತ್ಯೆಗೂ ಮುನ್ನ ಯೌಸುಫ್ ಜಮಾಲ್‌ದ್ದಿನ್ ವಿಷ ಕುಡಿಯುವ ವಿಡಿಯೋ ಮಾಡಿ ತಮ್ಮ ಸ್ನೇಹಿತರಿಗೆ ಕಳುಹಿಸಿದ್ದಾನೆ. ವಿಡಿಯೋದಲ್ಲಿ ತಾನುಮಾಡಿಕೊಂಡಿದ್ದ ಸಾಲದ ಬಗ್ಗೆ ಹಾಗೂ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದವರ ಬಗ್ಗೆ ಉಲ್ಲೇಖಿಸಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಮುಚ್ಚೋ ಸ್ಥಿತಿಗೆ ಸರ್ಕಾರಿ ಶಾಲೆ – ರಾಜ್ಯ ಸರ್ಕಾರದ ವಿರುದ್ಧ ಪ್ರಹ್ಲಾದ ಜೋಶಿ ಕಿಡಿ

Spread the loveನವದೆಹಲಿ: ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಆಸರೆಯಾಗಿದ್ದ ಸಾವಿರಾರು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ