Breaking News

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಕೇರಳ ಸಿಎಂ

Spread the love

ಉಡುಪಿ: ಕೇರಳ  ಸಿಎಂ ವಿ.ಡಿ. ಸತೀಶನ್  ಅವರು ಇಂದು (ಜು.11) ಮುಂಜಾನೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ  ಭೇಟಿ ನೀಡಿ, ದೇವಿಯ ದರ್ಶನ ಪಡೆದರು.

Z-ಪ್ಲಸ್ ಭದ್ರತೆಯಲ್ಲಿ ಅವರು ದೇವಸ್ಥಾನಕ್ಕೆ ಆಗಮಿಸಿದ್ದರು. ಮುಂಜಾನೆಯೇ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಬಳಿಕ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯಿತು.

ಸತೀಶನ್ ಅವರು ಸಿಎಂ ಆದ ಬಳಿಕ ಮೊದಲ ಭೇಟಿ ಇದಾಗಿದೆ. ಅವರು ಕೊಲ್ಲೂರು ಮೂಕಾಂಬಿಕೆಯ ಅಪಾರ ಭಕ್ತರಾಗಿದ್ದಾರೆ.

ಪೂಜೆ ಬಳಿಕ ಮಂಗಳೂರು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು. ಸತೀಶನ್‌ ಅವರು ಆಗಮಿಸಿದ್ದ ಹಿನ್ನೆಲೆ ಕ್ಷೇತ್ರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ