Breaking News

ಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ

Spread the love

ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದ್ದರಿಂದ ಕಳೆದ ಕೆಲವು ದಿನಗಳಿಂದ ಜಲಾವೃತಗೊಂಡಿದ್ದ ಚಿಕ್ಕೋಡಿ  ಉಪ ವಿಭಾಗ ವ್ಯಾಪ್ತಿಯ ಪ್ರಮುಖ 3 ಸೇತುವೆಗಳು ಶನಿವಾರ ಸಂಚಾರಕ್ಕೆ ಮುಕ್ತವಾಗಿವೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಕುಸಿದಿರುವುದರಿಂದ ಕೃಷ್ಣಾ ವೇದಗಂಗಾ ಮತ್ತು ದೂಧ್‌ಗಂಗಾ ನದಿಗಳ ಒಳಹರಿವಿನಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ.

ಚಿಕ್ಕೋಡಿ ಉಪ ವಿಭಾಗದಲ್ಲಿ ಮುಳುಗಡೆಯಾಗಿದ್ದ ಒಟ್ಟು 9 ಕೆಳ ಹಂತದ ಸೇತುವೆಗಳ ಪೈಕಿ 3 ಸೇತುವೆಗಳ ಮೇಲಿಂದ ನೀರು ಇಳಿದಿದ್ದು, ವಾಹನ ಸಂಚಾರ ಪುನಾರಂಭಗೊಂಡಿದೆ. ಆದರೆ ಇನ್ನುಳಿದ 6 ಸೇತುವೆಗಳು ಜಲಾವೃತವಾಗಿಯೇ ಉಳಿದಿದ್ದು, ಯಥಾಸ್ಥಿತಿ ಮುಂದುವರಿದಿದೆ.

ಕೃಷ್ಣಾ ನದಿಯ ನೀರಿನ ಮಟ್ಟ ತಗ್ಗಿದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನಲ್ಲಿರುವ ಐತಿಹಾಸಿಕ ಕುಡಚಿ – ಉಗಾರ ಸೇತುವೆ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಇದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಗಡಿ ಭಾಗದ ಪ್ರಯಾಣಿಕರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ವೇದಗಂಗಾ ನದಿಯ ಒಳಹರಿವು ಕಡಿಮೆಯಾದ ಕಾರಣ ನಿಪ್ಪಾಣಿ ತಾಲೂಕಿನ ವ್ಯಾಪ್ತಿಗೆ ಬರುವ ಜತ್ತಾಟ – ಭೀವಶಿ ಹಾಗೂ ಬೋಜ – ಕುನ್ನೂರು ಸೇತುವೆಗಳ ಮೇಲಿಂದ ನೀರು ಸಂಪೂರ್ಣವಾಗಿ ಇಳಿದಿದ್ದು, ಈ ಮಾರ್ಗದಲ್ಲೂ ವಾಹನ ಸಂಚಾರ ಎಂದಿನಂತೆ ಆರಂಭವಾಗಿದೆ.

ಸದ್ಯಕ್ಕೆ ಪ್ರವಾಹದ ಆತಂಕ ಕೊಂಚ ದೂರವಾಗಿದ್ದರೂ, ನದಿ ತೀರದ ನಿವಾಸಿಗಳು ಜಾಗರೂಕರಾಗಿರುವಂತೆ ಹಾಗೂ ಜಲಾವೃತಗೊಂಡಿರುವ ಇನ್ನುಳಿದ 6 ಕೆಳಹಂತದ ಸೇತುವೆಗಳ ಬಳಿ ಸಾರ್ವಜನಿಕರು ತೆರಳದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿದ್ದಾರೆ.

Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ