Breaking News

ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌

Spread the love

ಬೆಂಗಳೂರು: ಕೆಆರ್ ಪುರಂ  ವ್ಯಾಪ್ತಿಯಲ್ಲಿ ಪ್ರಿಯಕರನ ಜೊತೆ ಸೇರಿಕೊಂಡು ಶ್ವೇತಾ ತ್ರಿವಳಿ ಕೊಲೆ ಮಾಡಿ ತಿಂಗಳು ಕಳೆಯುವ ಮುನ್ನವೇ ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ತ್ರಿಬಲ್ ಮರ್ಡರ್ ಕೇಸ್ ಬೆಳಕಿಗೆ ಬಂದಿದೆ.

ಕಾಮಾಕ್ಷಿಪಾಳ್ಯದ ಕೊಟ್ಟಿಗೆ ಪಾಳ್ಯದಲ್ಲಿರುವ ಗಣೇಶ ದೇವಸ್ಥಾನದ ಬಳಿಯ ನಿವಾಸದಲ್ಲಿ ಈ ಘಟನೆ ನಡೆದಿದೆ. ತಾಯಿ ಮಂಗಳಮ್ಮ (55), ಅಜ್ಜಿ ನಂಜಮ್ಮ (65) ಹಾಗೂ ಮಾವ ಸತೀಶ್ (50) ಅನ್ನು ಆರೋಪಿ ಪ್ರಶಾಂತ್ (34) ಕೊಲೆ ಮಾಡಿದ್ದಾನೆ.

ಕುಟುಂಬಸ್ಥರೆಲ್ಲರು ಕಳೆದ ಏಳೆಂಟು ವರ್ಷದಿಂದ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿ ಪ್ರಶಾಂತ್‌ ಡ್ರೈವಿಂಗ್ ಕೆಲಸ ಮಾಡ್ತಿದ್ದ. ಆದರೆ ಕಳೆದ ಒಂದು ವರ್ಷದಿಂದ ಕೆಲಸಕ್ಕೆ ಹೋಗಿರಲಿಲ್ಲ. ಇಂದು ತಂದೆ ಕೆಲಸಕ್ಕೆ ಹೋಗಿದ್ದಾಗ ಪ್ರಶಾಂತ್‌ ಮೂವರನ್ನ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಮನೆಯ ಮುಖ್ಯದ್ವಾರದಲ್ಲಿಯೇ ಅಜ್ಜಿ ಹಾಗೂ ಅಮ್ಮನನ್ನು ಕೊಲೆ ಮಾಡಿದ್ದು, ಮಾವನನ್ನು ರೂಂನಲ್ಲಿ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ಪರಾರಿಯಾಗಲು ಯತ್ನಿಸಿದ್ದು, ಆತನನ್ನು ಗಮನಿಸಿದ ಮನೆ ಮಾಲೀಕ ರೂಂನಲ್ಲಿ ಕೂಡಿಹಾಕಿದ್ದಾರೆ. ಈ ವೇಳೆ ರೂಂನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಕೊಲೆ ನಿಖರ ಕಾರಣ ಏನು ಎನ್ನೋದು ತನಿಖೆಯಲ್ಲಿ ಹೊರಬರಬೇಕಿದೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ