Breaking News

ಮದುವೆಯಾದ ನಾಲ್ಕೇ ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

Spread the love

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ದಾರುಣ ಘಟನೆ ಸಂಭವಿಸಿದ್ದು, ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿರುವುದು ತೀವ್ರ ಆಘಾತವನ್ನುಂಟು ಮಾಡಿದೆ.

ಆತ್ಮಹತ್ಯೆಗೂ ಮುನ್ನ ಶ್ವೇತಾ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!

Spread the loveಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ  ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್ ಮತ್ತು ಅರಣ್ಯ ಅಧಿಕಾರಿಗಳು ಚಾಲಕರಿಂದ ಅಕ್ರಮವಾಗಿ ಹಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ