Breaking News

62 ಸಿಬ್ಬಂದಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದ ಸಚಿವ ಸತೀಶ ಜಾರಕಿಹೊಳಿ

Spread the love

 ಬೆಳಗಾವಿ: ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ, ಕ್ಲರ್ಕ್/ಕ್ಲರ್ಕ್ ಕಂ. ಡಾಟಾ ಎಂಟ್ರಿ ಆಪರೇಟರುಗಳ ವೃಂದದಿಂದ ಗ್ರಾಮ ಪಂಚಾಯತ್ ಗ್ರೇಡ್-2 ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗೆ ಆಂತರಿಕ ನೇಮಕಾತಿ ಹೊಂದಿರುವ 62 ಸಿಬ್ಬಂದಿಗಳಿಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೇಮಕಾತಿ ಆದೇಶ ಪತ್ರಗಳನ್ನು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ವಿತರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು, ಸದರಿ ಆಂತರಿಕ ನೇಮಕಾತಿಗಳು ಪಾರದರ್ಶಕತೆಯಿಂದ ಜರುಗಿಸಲಾಗಿದೆ. ಈ ನೇಮಕಾತಿಗಳಿಗೆ ಕಳೆದ ಎರಡು ತಿಂಗಳುಗಳಿಂದ ಪ್ರಕ್ರಿಯೆ ಜರುಗಿಸಿ ಸಂಬಂಧಿಸಿದ ಎಲ್ಲ ಸಿಬ್ಬಂದಿಗಳ ದಾಖಲೆಗಳನ್ನು ಕುಲಂಕಷವಾಗಿ ಪರಿಶೀಲಿಸಿ 62 ಜನರಿಗೆ ನೇಮಕಾತಿ ಪತ್ರ ವಿತಿರಿಸಲಾಗಿದೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಮುಂಬಡ್ತಿ ನೀಡಲಾಗುವುದು ಎಂದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ