Breaking News

ಸಿದ್ದರಾಮಯ್ಯ ನೇತೃತ್ವದಲ್ಲೇ 2028ರ ಚುನಾವಣೆ ಎದುರಿಸಲಿದ್ದೇವೆ: ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಳಗಾವಿ: ಬರುವ 2028ರ ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಕಾಂಗ್ರೆಸ್ ಪಕ್ಷವು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮರ್ಥ ನೇತೃತ್ವದಲ್ಲಿಯೇ ನಾವು ಚುನಾವಣೆ ಎದುರಿಸಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

ಸೋಮವಾರ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಅವರ ನೇತೃತ್ವದಲ್ಲಿಯೇ ನಾವು ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಸದ್ಯಕ್ಕೆ ಅಹಿಂದ ನಾಯಕತ್ವವನ್ನು ಯಾರು ಮುನ್ನಡೆಸಬೇಕು ಎಂಬ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯ ಅಗತ್ಯವಿಲ್ಲ. ನಾಯಕತ್ವ ಬದಲಾವಣೆ ಎನ್ನುವುದು ಕಾಲಕಾಲಕ್ಕೆ ನಡೆಯುವ ಸಹಜ ಪ್ರಕ್ರಿಯೆ. ಅನಗತ್ಯ ಚರ್ಚೆಗಳಿಗಿಂತ ಅಹಿಂದ ವರ್ಗವನ್ನು ಮತ್ತಷ್ಟು ಬಲವಾಗಿ ಸಂಘಟಿಸುವುದೇ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು.

ಸಚಿವ ಸಂಪುಟ ವಿಸ್ತರಣೆ ಹಾಗೂ ಹೊಸ ಸಚಿವರ ನೇಮಕದ ಕುರಿತು ಮಾಧ್ಯಮದವರು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮುಂದಿನ ಚುನಾವಣೆ ದೃಷ್ಟಿಯಿಂದ “ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಅಂತಿಮ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ಕೈಗೊಳ್ಳಲಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಗರಿಷ್ಠ ಅನುಕೂಲವಾಗುವ ಎಲ್ಲ ಅಂಶಗಳನ್ನು ಪರಿಗಣಿಸಿ ವರಿಷ್ಠರು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದರು.

ಹಾಲಿನ ದರ ಹೆಚ್ಚಳಕ್ಕೆ ರೈತರಿಂದ ಬೇಡಿಕೆ ವ್ಯಕ್ತವಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಹಾಲಿನ ದರ ಹೆಚ್ಚಳದ ವಿಷಯದಲ್ಲಿ ಸಂಬಂಧಿಸಿದ ಸಚಿವರು ಹಾಗೂ ಇಲಾಖೆಯೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದು, ಈ ಕುರಿತು ಸರ್ಕಾರದ ಮಟ್ಟದಲ್ಲಿ ಸಂಬಂಧಪಟ್ಟ ಸಚಿವರು ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ