Breaking News

ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆ ಅಗತ್ಯ; ಕರ್ನಾಟಕ ಹೈಕೋರ್ಟ್ ತೀರ್ಪು ಎತ್ತಿಹಿಡಿದ ಸುಪ್ರೀಂ

Spread the love

ನವದೆಹಲಿ: ಸಾರ್ವಜನಿಕ ಸೇವಕರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಲ್ಲಿ ಪ್ರಾಥಮಿಕ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್  ನೀಡಿದ್ದ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಕರ್ನಾಟಕ ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠ ಈ ಆದೇಶ ನೀಡಿದೆ. ಪ್ರತಿಯೊಂದು ಭ್ರಷ್ಟಾಚಾರ ಪ್ರಕರಣದಲ್ಲೂ ಪ್ರಾಥಮಿಕ ತನಿಖೆ ಕಡ್ಡಾಯವಲ್ಲ. ಆದರೆ, ಮೂಲ ಮಾಹಿತಿ ಅಪೂರ್ಣವಾಗಿದ್ದರೆ ಅಥವಾ ಆರೋಪಗಳಿಗೆ ಸಾಕಷ್ಟು ಆಧಾರ ಇಲ್ಲದಿದ್ದರೆ, ಪ್ರಾಥಮಿಕ ತನಿಖೆ ನಡೆಸುವುದು ಅಗತ್ಯ ಎಂದು ಹೈಕೋರ್ಟ್ ಹೇಳಿದ್ದ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

ಈ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ರ ಅಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಮತ್ತು ಅದರ ಆಧಾರದ ಮೇಲೆ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಈ ಹಿಂದೆ ರದ್ದುಪಡಿಸಿತ್ತು. ಜೊತೆಗೆ, ಮುಂದಿನ ಕ್ರಮ ಕೈಗೊಳ್ಳುವ ಮೊದಲು ಸೂಕ್ತ ಪ್ರಾಥಮಿಕ ತನಿಖೆ ನಡೆಸುವಂತೆ ಸೂಚಿಸಿತ್ತು.

ಈ ತೀರ್ಪಿನ ವಿರುದ್ಧ ಕರ್ನಾಟಕ ಲೋಕಾಯುಕ್ತ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ಹೈಕೋರ್ಟ್ ಆದೇಶದಲ್ಲಿ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ ಎಂದು ಹೇಳಿದ ಸುಪ್ರೀಂ ಕೋರ್ಟ್, ಲೋಕಾಯುಕ್ತದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ ತೀರ್ಪಿನ ಸಿಂಧುತ್ವವನ್ನು ಎತ್ತಿಹಿಡಿದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ