Breaking News

ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 20ಕ್ಕೂ ಹೆಚ್ಚು ರೈತರ ವಿರುದ್ಧ ಎಫ್‌ಐಆರ್‌

Spread the love

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜಂಟಿ ಭೂಮಾಪನ  ಕಾರ್ಯದ ವೇಳೆ ಉಂಟಾದ ಜಟಾಪಟಿ ಈಗ ಪೊಲೀಸ್  ಠಾಣೆಯ ಮೆಟ್ಟಿಲೇರಿದೆ.

ಮಂಡಲಹಳ್ಳಿಯಲ್ಲಿ ಜೆಎಂಸಿ ಸರ್ವೆಗೆತಡೆಯೊಡ್ಡಿ, ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ದೈಹಿಕ ಹಲ್ಲೆ ಹಾಗೂ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 20ಕ್ಕೂ ಹೆಚ್ಚು ರೈತರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಂದಾಯ ಅಧಿಕಾರಿಗಳು ನೀಡಿದ ಅಧಿಕೃತ ದೂರಿನ ಅನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆಯ ವ್ಯಾಪ್ತಿಗೆ ಬರುವ ಹಲವು ಗ್ರಾಮಗಳಲ್ಲಿ ಇಂದೂ ಕೂಡ ರೈತರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ. ಜಿಲ್ಲಾಡಳಿತ ಅಥವಾ ಅಧಿಕಾರಿಗಳು ಮತ್ತೆ ಜೆಎಂಸಿ ಸರ್ವೆಯನ್ನು ಮುಂದುವರಿಸಲು ಮುಂದಾದರೆ, ಸ್ಥಳದಲ್ಲೇ ತಡೆದು ತೀವ್ರ ಪ್ರತಿಭಟನೆ ನಡೆಸಲು ರೈತ ಸಂಘಟನೆಗಳು ಮತ್ತು ಸ್ಥಳೀಯರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸದ್ಯಕ್ಕೆ ಜೆಎಂಸಿ ಸರ್ವೆ ಕಾರ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಗೊಂದಲ ಮತ್ತು ಸಂಘರ್ಷಕ್ಕೆ ಆಸ್ಪದ ನೀಡದೆ, ಮುಂದಿನ ದಿನಗಳಲ್ಲಿ ಮೊದಲು ಪ್ರತಿಭಟನಾ ನಿರತ ರೈತರೊಂದಿಗೆ ಶಾಂತಿಯುತ ಮಾತುಕತೆ ನಡೆಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.


Spread the love

About Laxminews 24x7

Check Also

10,000 ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಆದೇಶ – ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ.

Spread the loveಬೆಂಗಳೂರು: ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿಕೆ ಶಿವಕುಮಾರ್‌  ಅವರು ಮೊದಲು ಘೋಷಣೆ ಮಾಡಿದಂತೆ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ