Breaking News

ವಿದ್ಯಾರ್ಥಿನಿ ಮಾನಭಂಗಕ್ಕೆ ಯತ್ನಿಸಿದ ಆಟೋ ಚಾಲಕನಿಗೆ ಜೈಲು ಶಿಕ್ಷೆ

Spread the love

ಬೆಳಗಾವಿ: ಹಾಡಹಗಲೇ ಕಾಲೇಜ್ ವಿದ್ಯಾರ್ಥಿನಿ ಮಾನಭಂಗಕ್ಕೆ ಯತ್ನಿಸಿದ ಆಟೋ ಚಾಲಕನಿಗೆ 2ನೇ ಜೆಎಂಎಫ್ ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ, 20 ಸಾವಿರ ರೂ. ದಂಡ ವಿಧಿಸಿದೆ. ಜಾಫರ್ ಸಾದಿಕ್ ಮೈನುದ್ದೀನ್ ಕಂಚಿ ಶಿಕ್ಷೆಗೊಳಗಾದ ಅಪರಾಧಿ.
2019ರ ಜೂ.23ರಂದು ಕೇಂದ್ರ ಬಸ್ ನಿಲ್ದಾಣದಿಂದ ಕೋಟೆ ಕೆರೆ ರಸ್ತೆಯತ್ತ ನಡೆದುಕೊಂಡು ಹೊರಟಿದ್ದಾಗ ಮಳೆ ಬಂದ ಕಾರಣಕ್ಕೆ ವಿದ್ಯಾರ್ಥಿನಿ ಈತನ ಆಟೋ ಹತ್ತಿದ್ದಳು. ಈಕೆ ಒಂಟಿಯಾಗಿದ್ದನ್ನೇ ದುರುಪಯೋಗಪಡಿಸಿಕೊಂಡಿದ್ದ ಚಾಲಕ ಕೆಇಬಿ ಪವರ್ ಗ್ರೀಡ್ ಬಳಿ ಆಟೋ ನಿಲ್ಲಿಸಿ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು.
ನ್ಯಾಯಾಧೀಶ ಗುರುಪ್ರಸಾದ ಸಿ. ವಿಚಾರಣೆ ನಡೆಸಿ ಶಿಕ್ಷೆ ಪ್ರಕಟಿಸಿದ್ದಾರೆ. ದಂಡದ ಮೊತ್ತದಲ್ಲಿ 19,000 ರೂ. ಸಂತ್ರಸ್ತೆಗೆ ನೀಡಲು ಆದೇಶಿಸಿದ್ದಾರೆ ಎಂದು ಸರ್ಕಾರದ ಪರ ವಾದ ಮಂಡಿಸಿದ್ದ ಸಹಾಯಕ ಅಭಿಯೋಜಕ ಮಹಾಂತೇಶ ಚಳಕೊಪ್ಪ ತಿಳಿಸಿದ್ದಾರೆ.

Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ