Breaking News

ಬೆಳಗಾವಿಯ ಪೊಲೀಸ್ ಕಮಿಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್

Spread the love

ಬೆಳಗಾವಿ: ನಗರದ ಪೊಲೀಸ್‌ ಕಮಿಷನರ್‌ ಕಚೇರಿ ಪಕ್ಕದಲ್ಲೇ ಫೈರಿಂಗ್‌ ನಡೆದಿದ್ದು, ವ್ಯಕ್ತಿ ಕೂದಲೆಳೆ ಅಂತರದಿಂದ ಪಾರಾಗಿದ್ದಾನೆ.

ನಗರದ ಜಿಮಖಾನ್ ಕ್ಲಬ್‌ನಲ್ಲಿ ಫೈರಿಂಗ್ ಮಾಡಿ ವ್ಯಕ್ತಿಯ ಹತ್ಯೆಗೆ ಯತ್ನ ನಡೆದಿತ್ತು. ಸುರೇಶ್ ಜಾಲಗಾರ ಎಂಬಾತನ ತಲೆಗೆ ಗನ್‌ನಿಂದ ಕುಕ್ಕಿ ದುಷ್ಕರ್ಮಿಗಳು ಬಳಿಕ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಮುನ್ನವೇ ತಳ್ಳಿ ಸುರೇಶ್ ಎಸ್ಕೇಪ್ ಆಗಿದ್ದಾರೆ. ಸುರೇಶ್ ಪರಾರಿಯಾದ ಬಳಿಕ ಹೊರ ಬಂದು ಮತ್ತೆ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಐದು ಜನರು ಜಿಮಖಾನ್ ಕ್ಲಬ್‌ಗೆ ಎಂಟ್ರಿ ಕೊಟ್ಟರು. ಇಬ್ಬರು ಹೊರ ನಿಂತರೆ, ಮೂವರು ಒಳ ಬಂದು ಹತ್ಯೆಗೆ ಯತ್ನಿಸಿದ್ದರು. ರಮ್ಮಿ ಆಡ್ತಿದ್ದ ಸುರೇಶ್ ಮೇಲೆ ಫೈರಿಂಗ್ ಮಾಡಿ ಹತ್ಯೆಗೆ ಯತ್ನಿಸಿದ್ದರು. ಸ್ಥಳಕ್ಕೆ ಪೊಲೀಸ್ ಕಮಿಷನರ್ ಭೂಷಣ್ ಬೊರಸೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಫುಲ್ ಪಾಟೀಲ್ ಎಂಬಾತನ ಮೇಲೆ ಈ ಹಿಂದೆ ಸುರೇಶ್ ಜಾಲಗಾರ ಫೈರಿಂಗ್ ಮಾಡಿದ್ದ. ಇದಕ್ಕೆ ಸೇಡು ತೀರಿಸಿಕೊಳ್ಳಲು ಇಂದು ಪ್ರಫುಲ್ ಪಾಟೀಲ್ ಕಡೆಯ ಹುಡುಗರಿಂದ ಹತ್ಯೆಗೆ ಯತ್ನ ಮಾಡಿದ್ದಾರೆಂದ ಸುರೇಶ್ ಜಾಲಗಾರ ಆರೋಪಿಸಿದ್ದಾರೆ. ಸುರೇಶ್‌ನನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ