Breaking News

ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ಜೀವ ಉಳಿಸಿಕೊಳ್ಳಲು ವಾರ್ಡ್‌ನಿಂದ ಓಡಿದ ರೋಗಿಗಳು

Spread the love

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಆಪರೇಷನ್ ಥಿಯೇಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆವರಿಸುತ್ತಿದ್ದಂತೆ ಜೀವ ಉಳಿಸಿಕೊಳ್ಳಲು ರೋಗಿಗಳು ಆಸ್ಪತ್ರೆಯಿಂದ ಹೊರಗೆ ಓಡಿಬಂದಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೊಗೆ ಕಾಣಿಸುತ್ತಿದ್ದಂತೆಯೇ ಆಸ್ಪತ್ರೆ ಸಿಬ್ಬಂದಿ ಕೆಳ ಮಹಡಿಯಲ್ಲಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಅದೃಷ್ಟವಶಾತ್ ಬೆಂಕಿ ಕಾಣಿಸಿಕೊಂಡ ವೇಳೆ ಆಪರೇಷನ್ ಥಿಯೇಟರ್‌ನಲ್ಲಿ ಯಾವುದೇ ರೋಗಿಗಳು ಇರಲಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಳಿಕ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ, ರಾತ್ರಿ ಸುಮಾರು 9 ಗಂಟೆಗೆ ಅವಘಡ ಸಂಭವಿಸಿದ್ದರೂ ಎರಡು ಗಂಟೆ ಕಳೆದರೂ ತಾಲೂಕು ಆರೋಗ್ಯ ಅಧಿಕಾರಿ (THO) ರವಿ ಸ್ಥಳಕ್ಕೆ ಆಗಮಿಸಿಲ್ಲ ಎಂದು ಸ್ಥಳೀಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ

Spread the loveಬೆಂಗಳೂರು: ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಗ್ರನಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಎನ್‌ಐಎ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ