Breaking News

ಮನೆ ಮನೆಗೆ ಹೋಗದೆ ಒಂದೇ ಕಡೆ ಕುಳಿತು SIR ಪ್ರಕ್ರಿಯೆ; BLOಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

Spread the love

ಚಿಕ್ಕೋಡಿ: ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ SIR  ಪ್ರಕ್ರಿಯೆಯನ್ನು ಒಂದೇ ಸ್ಥಳದಲ್ಲಿ ಕುಳಿತು ನಡೆಸಲಾಗುತ್ತಿದೆ ಎಂಬ ಆರೋಪ ಬೆಳಗಾವಿ  ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೇಳಿಬಂದಿದೆ.

ಸಂಕೇಶ್ವರ ಪಟ್ಟಣದಲ್ಲಿ ಕೆಲವು BLO ಅಧಿಕಾರಿಗಳು ಮನೆ ಮನೆಗೆ ತೆರಳದೆ ಸಮುದಾಯ ಭವನದಲ್ಲೇ ಕುಳಿತು SIR ಪ್ರಕ್ರಿಯೆ ನಡೆಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಸರ್ಕಾರದ ನಿಯಮದಂತೆ ಮಾಹಿತಿ ಸಂಗ್ರಹಿಸದೆ, ಫೋನ್ ಕರೆ ಮೂಲಕ ಮಾಹಿತಿ ಪಡೆದು ಫಾರ್ಮ್ ಭರ್ತಿ ಮಾಡಲಾಗುತ್ತಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರಶ್ನಿಸಿದ ಸಾರ್ವಜನಿಕರಿಗೆ BLO ಅಧಿಕಾರಿಗಳು ಸಮರ್ಪಕ ಉತ್ತರ ನೀಡುತ್ತಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಮೇಲಾಧಿಕಾರಿಗಳ ಗಮನಕ್ಕೂ ವಿಷಯ ತಂದರೂ ಯಾವುದೇ ಕ್ರಮವಾಗಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಿಯಮ ಉಲ್ಲಂಘನೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ