ಬೆಂಗಳೂರು (ಜುಲೈ 22); ನಗರದಲ್ಲಿ ವೇಶ್ಯಾವಾಟಿಕೆ ನಡೆಸುವ ಸಲುವಾಗಿ ಯುವತಿಯರನ್ನು ಅಕ್ರಮವಾಗಿ ಕಳ್ಳ ಸಾಗಾಣೆ ನಡೆಸುತ್ತಿದ್ದ ಪಿಂಪ್ ಸ್ವಾತಿ ಎಂಬ ಮಹಿಳೆಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಮೊದಲ ಬಾರಿಗೆ KPIT (Karnataka prevention of illegal trafficking act) ಕಾಯ್ದೆಯ ಅಡಿ ಬಂಧಿಸಿದ್ದಾರೆ.
ನಗರದಲ್ಲಿ ಸ್ವಾತಿ ಎಂಬ ಮಹಿಳೆ ವಿವಿಧೆಡೆ ಮಸಾಜ್ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹಲವು ಬಾರಿ ಈಕೆಯನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ಮತ್ತೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರು. ಅಲ್ಲದೆ, ವೇಶ್ಯಾವಾಟಿಕೆಗಾಗಿ ಯುವತಿಯರನ್ನ ಆಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ನಗರದಲ್ಲಿ ಸ್ವಾತಿ ಎಂಬ ಮಹಿಳೆ ವಿವಿಧೆಡೆ ಮಸಾಜ್ ಸ್ಪಾಗಳನ್ನು ತೆರೆದು ಈ ಸ್ಪಾಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದರು. ಹಲವು ಬಾರಿ ಈಕೆಯನ್ನು ಬಂಧಿಸಲಾಗಿತ್ತು. ಆದರೆ, ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗದೆ ಮತ್ತೆ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದರು. ಅಲ್ಲದೆ, ವೇಶ್ಯಾವಾಟಿಕೆಗಾಗಿ ಯುವತಿಯರನ್ನ ಆಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.ಹೀಗಾಗಿ ಇಂದು ಸ್ವಾತಿ ಎಂಬ ಪಿಂಪ್ ಅನ್ನು ಮತ್ತೆ ಬಂಧಿಸಿರುವ ಬೆಂಗಳೂರು ಸಿಸಿಬಿ ಪೊಲೀಸರು, ಆಕೆಯನ್ನು KPIT ಕಾಯ್ದೆಯ ಅಡಿಯಲ್ಲಿ ಬಂಧಿಸಿದ್ದಾರೆ. ಈ ಕಾಯ್ದೆಯಡಿನ್ವಯ ಒಂದು ವರ್ಷ ಆರೋಪಿಗೆ ಜಾಮೀನು ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.