Breaking News

ತ್ರಿವಳಿ ಕೊಲೆ ಕೇಸ್ – ಬ್ರೈನ್ ಮ್ಯಾಪಿಂಗ್ ಮುನ್ನವೇ ಮೂವರನ್ನು ಕೊಂದಿದ್ದು ನಾನೇ: ತಪ್ಪೊಪ್ಪಿಕೊಂಡ ಆರೋಪಿ

Spread the love

ಬೆಂಗಳೂರು: ನಗರದ ಕೆಆರ್ ಪುರಂನಲ್ಲಿ  ನಡೆದ ತ್ರಿವಳಿ ಕೊಲೆ ಕೇಸ್ ಸಂಬಂಧಿಸಿದಂತೆ ಆರೋಪಿ ಕೆನತ್ ಮೂವರನ್ನು ಕೊಲೆ ಮಾಡಿದ್ದು ನಾನೇ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ತನಿಖೆ ವೇಳೆ, ಆರಂಭದಲ್ಲಿ ಆರೋಪಿ ಶ್ವೇತಾ ಅಮ್ಮನನ್ನು ಕೊಲೆ ಮಾಡಿದ್ದು ನಾನು ಎಂದಿದ್ದಳು. ಆದರೆ ಕೆನತ್ ಕೂಡ ಮೂವರನ್ನು ಕೊಲೆ ಮಾಡಿದ್ದು ನಾನೇ ಎಂದಿದ್ದ. ಅಲ್ಲದೇ ಸಾಯುವ ಮುನ್ನ ತಂದೆ ಸೋಮಸುಂದರ್ ಕೆನತ್ ಮತ್ತು ಶ್ವೇತ ಇಬ್ಬರು ಸೇರಿ ಚುಚ್ಚಿದ್ರು ಅಂತ ಹೇಳಿದ್ದರು. ಹೀಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದಾಗ ಒಬ್ಬನೇ ವ್ಯಕ್ತಿ ಏಕಕಾಲದಲ್ಲಿ ಒಬ್ಬರನ್ನು ಸಾಯಿಸಲು ಸಾಧ್ಯವಿಲ್ಲ ಎಂದಿದ್ದರು.

ಬಳಿಕ ಕೋರ್ಟ್ ಅನುಮತಿ ಮೇರೆಗೆ ಕೆಆರ್ ಪುರ ಪೊಲೀಸರು (KR Police) ಮೂರು ದಿನದಲ್ಲಿ ಬ್ರೈನ್ ಮ್ಯಾಪಿಂಗ್ ನಡೆಸೋಕೆ ಸಿದ್ಧತೆ ನಡೆಸಿದ್ದರು. ಆದರೆ ಬ್ರೈನ್ ಮ್ಯಾಪಿಂಗ್ ಮಾಡೋಕೂ ಮುನ್ನವೇ ಇದರಲ್ಲಿ ಶ್ವೇತಾಳ ಪಾತ್ರವಿಲ್ಲ. ನಾನೇ ಮೂವರನ್ನು ಕೊಲೆ ಮಾಡಿದ್ದು ಎಂದು ತಪ್ಪೊಪ್ಪಿಕೊಂಡಿದ್ದಾನೆ.

ಆಗಿದ್ದೇನು?
ಆರೋಪಿಗಳಾದ ಶ್ವೇತಾ ಹಾಗೂ ಕೆನತ್ ಇಬ್ಬರು ಸೇರಿಕೊಂಡು ಶ್ವೇತಾಳ ತಂದೆ ಸೋಮಸುಂದರ್, ತಾಯಿ ಮುತ್ತು ಲಕ್ಷ್ಮಿ, ಸಹೋದರಿ ಸುಪ್ರಿಯಾಳನ್ನು ಕೊಲೆ ಮಾಡಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ