Breaking News

ಬಿಡದಿ ಟೌನ್‌ಶಿಪ್‌ ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ – ಸಮಿತಿ ರಚಿಸುತ್ತೇನೆ ಎಂದ ಸಿಎಂ

Spread the love

ಬೆಂಗಳೂರು: ಬಿಡದಿ ಟೌನ್‌ಶಿಪ್‌  ಯೋಜನೆಗೆ ಸಂಬಂಧಿಸಿದಂತೆ ಪರ ಹಾಗೂ ವಿರೋಧ ಹೋರಾಟಗಳು ತೀವ್ರಗೊಂಡಿರುವ ಹೊತ್ತಿನಲ್ಲೇ ಸಿಎಂ ಡಿಕೆ ಶಿವಕುಮಾರ್‌  ಯೋಜನೆಗೆ 2 ತಿಂಗಳು ತಾತ್ಕಾಲಿಕ ಬ್ರೇಕ್‌ ನೀಡಿದ್ದಾರೆ.

ಇಂದು ಸುದ್ದಿಗೋಷ್ಠಿ ನಡೆಸಿ ಸುದೀರ್ಘವಾಗಿ ಮಾತನಾಡಿದ ಮುಖ್ಯಮಂತ್ರಿಗಳು, ಬಿಡದಿ ಟೌನ್‌ಶಿಪ್‌ ಯೋಜನೆ 2 ತಿಂಗಳು ಮುಂದೂಡುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಸಣ್ಣ ಸಮಿತಿಯೊಂದನ್ನ ರಚನೆ ಮಾಡುತ್ತೇನೆ. 2 ತಿಂಗಳಲ್ಲಿ ವರದಿ ಪಡೆಯುತ್ತೇನೆ ಎಂದು ತಿಳಿಸಿದ್ದಾರೆ.

ಇಷ್ಟ ಇದ್ದವರು ಕೊಡಲಿ, ಕೊಡದಿದ್ದವರು ಬೇಡ. ಆದ್ರೆ ಇದು ನಿರಂತರ ಪ್ರಕ್ರಿಯೆ, ಎರಡ್ಮೂರು ತಿಂಗಳ ಬಳಿಕ ಸಮಿತಿ ವರದಿ‌ ಕೊಡಲಿ, ಅಮೇಲೆ ನೋಡೋಣ ಎಂದಿದ್ದಾರೆ.

ನನ್ನ ಕನಸಿನ ಯೋಜನೆ ಅಲ್ಲ
ಬಿಡದಿಯಲ್ಲಿ (Bidadi) ನಡೆದ ಘಟನೆ ನನ್ನ ಮನಸ್ಸಿಗೆ ನೋವಾಗಿದೆ. ಬಿಡದಿ ಟೌನ್ ಶಿಪ್ ನನ್ನ ಕನಸಿನ ಯೋಜನೆ ಅಲ್ಲ. ನಾನು ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಫೌಂಡೇಶನ್ ಹಾಕಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಕ್ಕೆ ಕೆಲವರಿಗೆ ಸಹಿಸಲು ಆಗುತ್ತಿಲ್ಲ. ನಾನು ಸಿಎಂ ಆಗಿದ್ದಕ್ಕೆ ಕೆಲವರು ನಿದ್ದೆನೇ ಮಾಡುತ್ತಿಲ್ಲ. ನಾನೊಬ್ಬ ರೈತನ ಮಗ ರೈತರ ಶ್ರಮದ ಬಗ್ಗೆ ನನಗೆ ಗೊತ್ತಿದೆ ಎಂದು ಡಿಕೆಶಿ ಹೇಳಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ