Breaking News

ಎಂಟನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿಯ ಬಂಧನ

Spread the love

ಚಿಕ್ಕಬಳ್ಳಾಪುರ: ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ವ್ಯಕ್ತಿಯನ್ನು ಬಂಧಿಸಿ, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

ಬಂಧಿತ ಶಿಡ್ಲಘಟ್ಟ ತಾಲೂಕಿನ ಚರಣ್‌ (೨೫) ಎಂಬುದಾಗಿ ಗುರುತಿಸಲಾಗಿದೆ. ೮ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯು ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪಾಲಕರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ತಪಾಸಣೆ ಕೈಗೊಂಡ ವೈದ್ಯರಿಗೆ ಬಾಲಕಿ ಗರ್ಭಿಣಿಯಾಗಿರುವುದು  ಗೊತ್ತಾಗಿದೆ. ತಕ್ಷಣ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ ತನಿಖೆ ಕೈಗೊಂಡ ಪೊಲೀಸರು ಚರಣ್‌ ಎಂಬುವವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

ಬಾಲಕಿ ಹಾಗೂ ಆರೋಪಿಯು ಒಂದೇ ಸಮುದಾಯಕ್ಕೆ ಸೇರಿದವರು. ಇದರ ನಡುವೆ ಬಾಲಕಿಯನ್ನು ಬೆದರಿಸಿ, ಅತ್ಯಾಚಾರವೆಸಗಿದ್ದಾನೆ. ಅಮಾಯಕಿ ಸಂತ್ರಸ್ಥೆ ನೋವಿನಲ್ಲಿ ಸುಮ್ಮನಿದ್ದಳು ಎನ್ನುವುದು ತಿಳಿದು ಬಂದಿದೆ. ಪೊಲೀಸರು ವೈದ್ಯಕೀಯ ವರದಿ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ