Breaking News

ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ದಿಢೀರ್ ಏರುಪೇರು – ಆಸ್ಪತ್ರೆಗೆ ದಾಖಲು

Spread the love

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ  ಅವರ ಪತ್ನಿ ಆರೋಗ್ಯದಲ್ಲಿ ದಿಢೀರ್‌ ಏರುಪೇರಾಗಿದೆ. ಅನಾರೋಗ್ಯ ಹಿನ್ನೆಲೆ ಪತ್ನಿ ಚೆನ್ನಮ್ಮ ಅವರನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಹಿನ್ನೆಲೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ  ಅವರನ್ನು ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ರಾತ್ರಿ 10 ಗಂಟೆ ಬಳಿಕ ಆರೋಗ್ಯದಲ್ಲಿ ಏರುಪೇರಾಗಿದೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ