Breaking News

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

Spread the love

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಐಪಿಎಲ್ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ.

2020 ರ ಐಪಿಎಲ್ ಯುಎಇಯಲ್ಲಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಬ್ರಿಜೇಶ್ ಪಟೇಲ್ ಹೇಳಿದ್ದಾರೆ.

ಮುಂದಿನ ವಾರ ಐಪಿಎಲ್ ಆಡಳಿತ ಮಂಡಳಿಯ ವಿಡಿಯೋ ಕಾನ್ಫರೆನ್ಸ್ ನಡೆಯಲಿದೆ. ಈ ವೇಳೆ ಪಂದ್ಯಾವಳಿಯ ದಿನಾಂಕಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ಚರ್ಚೆ ನಡೆಯಲಿದೆ. ಐಪಿಎಲ್ 2020ರ ವೇಳಾಪಟ್ಟಿ ಭಾರತ ಸರ್ಕಾರದಿಂದ ಅನುಮೋದನೆ ಪಡೆದ ನಂತ್ರ ಸಿದ್ಧವಾಗಲಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ