Breaking News

ಶಾಹಾಪುರದ ಚಿಂತಾಮಣರಾವ್ ಪ್ರೌಢಶಾಲೆಯಲ್ಲಿ ಉಚಿತ ಕೃತಕ ಬುದ್ಧಿಮತ್ತೆ (AI) ಹಾಗೂ ಕೋಡಿಂಗ್ ಪುಸ್ತಕಗಳ ವಿತರಣೆ

Spread the love

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಭಯ ಪಾಟೀಲ ಅವರ ಮಾರ್ಗದರ್ಶನದಲ್ಲಿ ಚಾಣಕ್ಯ ಎಜುಕೇಶನ್ ಅಂಡ್ ಸೋಶಿಯಲ್ ವೆಲ್ಫೇರ್ ಸೊಸೈಟಿ, ಬೆಳಗಾವಿ ವತಿಯಿಂದ ಶಾಹಾಪುರದ ಚಿಂತಾಮಣರಾವ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಕೋಡಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾ ಅಧ್ಯಕ್ಷ  ಶ್ರೀಮತಿ ಗೀತಾ ಸುತಾರ, ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಲಕ್ಷ್ಮಿ ನಾಯಕ್, ಶ್ರೀಮತಿ ಚೇತನಾ ಸಾರಂಗ್ (CEO, ದತ್ತಾಂಶ), ಶ್ರೀಮತಿ ರೇಖಾ ಗುರವಗೋಳ, ಶ್ರೀ ಲಿಂಗರಾಜ ಪಾಟೀಲ, ಶ್ರೀ ಅನಿಲ್ ಕೋರೆ, ಶ್ರೀ ಮಹಾಂತೇಶ್ ನಂದಿಹಳ್ಳಿ, ಶ್ರೀ ದೇವೇಂದ್ರ ಯಾದವ್, ಶ್ರೀ ಮಂಜುನಾಥ ಹಂಚಿನಮನಿ, ಶ್ರೀ ಮಹೇಶ್ ಹಾಗೂ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಚಾಣಕ್ಯ ಎಜುಕೇಶನ್ ಅಂಡ್ ಸೋಶಿಯಲ್ ವೆಲ್ಫೇರ್ ಸೊಸೈಟಿ, ಬೆಳಗಾವಿ ಅಧ್ಯಕ್ಷರಾದ ಶ್ರೀ ನಾಗರಾಜ್ ಪಾಟೀಲ ಅವರು ವಿದ್ಯಾರ್ಥಿಗಳಿಗೆ ಉಚಿತವಾಗಿ AI ಮತ್ತು ಕೋಡಿಂಗ್ ಪುಸ್ತಕಗಳನ್ನು ವಿತರಿಸಿದರು.

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಇಂದಿನ ಡಿಜಿಟಲ್ ಯುಗದಲ್ಲಿ ಕೃತಕ ಬುದ್ಧಿಮತ್ತೆ, ಕೋಡಿಂಗ್ ಹಾಗೂ ತಂತ್ರಜ್ಞಾನ ಶಿಕ್ಷಣದ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಭವಿಷ್ಯದ ಸವಾಲುಗಳಿಗೆ ಸಜ್ಜಾಗಬೇಕೆಂದು ಕರೆ ನೀಡಿದರು.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಧುನಿಕ ಶಿಕ್ಷಣದ ಅವಕಾಶಗಳನ್ನು ಒದಗಿಸಿ, ಡಿಜಿಟಲ್ ಜ್ಞಾನವನ್ನು ವಿಸ್ತರಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲೆಯ ವತಿಯಿಂದ ಸಮಾಜದ ಈ ಶಿಕ್ಷಣಮುಖಿ ಕಾರ್ಯಕ್ಕೆ ಸಹಕಾರ ನೀಡಿದ ಎಲ್ಲಾ ಗಣ್ಯರಿಗೆ ಕೃತಜ್ಞತೆ ಸಲ್ಲಿಸಲಾಯಿತು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ