ಬೆಂಗಳೂರು: ಬುದ್ಧಿವಾದ ಹೇಳಿದ್ದಕ್ಕೆ ಅಜ್ಜಿಯನ್ನೇ ಮೊಮ್ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕಂಚಗಯ್ಯದೊಡ್ಡಿಯಲ್ಲಿ ನಡೆದಿದೆ.
ಗೌರಮ್ಮ (65) ಮೃತ ವೃದ್ಧೆ. ಪ್ರಜ್ವಲ್ ಕೊಲೆ ಮಾಡಿದ ಮೊಮ್ಮಗ. ಪ್ರಜ್ವಲ್ ಎಲ್ಲಿಯೂ ಕೆಲಸಕ್ಕೆ ಹೋಗದೇ ಗಾಂಜಾ, ಕುಡಿತದ ವ್ಯಸನಿಯಾಗಿದ್ದ. ಮಗ ಕೈ ತಪ್ಪುತ್ತಿದ್ದಾನೆ ಎಂದು ಅಜ್ಜಿ ಆತನ ತಾಯಿಗೆ ಹೇಳಿದ್ದಾರೆ. ನಶೆಯಲ್ಲಿ ಮನೆಗೆ ಬಂದು ಗಲಾಟೆ ಮಾಡಿದಾಗ ಅಜ್ಜಿ ಆತನಿಗೆ ಬುದ್ಧಿ ಹೇಳಿದ್ದರು. ಇದರಿಂದ ರೊಚ್ಚಿಗೆದ್ದ ಮೊಮ್ಮಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಾಕುವಿನಿಂದ ಇರಿದು ಅಜ್ಜಿಯ ಕೊಲೆ ಮಾಡಿದ್ದಾನೆ.
ಮುಂಜಾನೆ ಮನೆಯ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಅಜ್ಜಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7