Breaking News

ಉಪಸಭಾಪತಿ ಪ್ರಾಣೇಶ್ ಪರಿಷತ್‌ ಸದಸ್ಯತ್ವ ರದ್ದು

Spread the love

ನವದೆಹಲಿ: ಉಪಸಭಾಪತಿ ಪ್ರಾಣೇಶ್  ಪರಿಷತ್‌ ಸದಸ್ಯತ್ವ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌  ಆದೇಶ ಹೊರಡಿಸಿದೆ.

ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಪ್ರಾಣೇಶ್ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಆದರೆ, ಪ್ರಾಣೇಶ್‌ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಗಾಯತ್ರಿ ಶಾಂತೇಗೌಡ ಮೇಲುಗೈ ಸಾಧಿಸಿದ್ದಾರೆ.

ಚಿಕ್ಕಮಗಳೂರು ಕ್ಷೇತ್ರದಿಂದ ಪರಿಷತ್‌ ಸ್ಥಾನಕ್ಕೆ 2021ರ ಡಿಸೆಂಬರ್‌ನಲ್ಲಿ ಚುನಾವಣೆ ನಡೆದಿತ್ತು. ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧು ಆಗಿದ್ದವು. ಪ್ರಾಣೇಶ್‌ 1,188 ಮತಗಳನ್ನು ಪಡೆದಿದ್ದರು. ಗಾಯತ್ರಿ ಶಾಂತೇಗೌಡ 1,182 ಮತಗಳನ್ನು ಗಳಿಸಿದ್ದರು. ಪ್ರಾಣೇಶ್‌ ಆರು ಮತಗಳ ಅಂತರದಿಂದ ಗೆದ್ದಿದ್ದರು.

ಆದರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ, ಮೂಡಿಗೆರೆ ಪಟ್ಟಣ ಪಂಚಾಯಿತಿಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನ ಮಾಡುವ ಅವಕಾಶ ಇಲ್ಲ ಎಂದು ಗಾಯತ್ರಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.


Spread the love

About Laxminews 24x7

Check Also

ಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Spread the loveನವದೆಹಲಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ  ಪರೇಡ್ ಶುರುವಾಗಿದೆ. ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ