Breaking News

24 ವರ್ಷದ ಮಹಿಳೆ ಕಾಣೆ: ಪತ್ತೆಗೆ ಮನವಿ

Spread the love

 ಬೆಳಗಾವಿ: ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ನಿವಾಸಿಯಾದ ನೇತ್ರಾ ಶಿವಾನಂದ ಗಸ್ತಿ ಎಂಬ 24 ವರ್ಷದ ಮಹಿಳೆ ಜುಲೈ 12, 2026 ರಂದು ಬೆಳಿಗ್ಗೆ 11:30 ಗಂಟೆ ಸುಮಾರಿಗೆ ತನ್ನ ಇಬ್ಬರು ಮಕ್ಕಳನ್ನು ಗೋಕಾಕ ತಾಲೂಕಿನ ಕೆಮ್ಮನಕೋಲ ಗ್ರಾಮದಲ್ಲಿ ತನ್ನ ತವರು ಮನೆಯಲ್ಲಿ ಬಿಟ್ಟು ಮನೆಯಿಂದ ಎಲ್ಲಿಯೋ ಹೋಗಿ ಕಾಣೆಯಾಗಿದ್ದರ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾಣೆಯಾದ ಮಹಿಳೆಯ ಚಹರೆ: ಎತ್ತರ 5 ಫೂಟ, ಸದೃಢ ಮೈಕಟ್ಟು, ದುಂಡು ಮುಖ, ದುಂಡು ಮೂಗು, ಗೋದಿಗೆಂಪು ಮೈಬಣ್ಣ, ಕಪ್ಪು ಕೂದಲು, ತಿಳಿ ಹಸಿರು ಬಣ್ಣದ ಚೂಡಿದಾರ ಹಾಗೂ ಕನ್ನಡ ಭಾಷೆ ಮಾತನಾಡುತ್ತಾಳೆ.

ಕಾಣೆಯಾದ ಮಹಿಳೆಯ ಬಗ್ಗೆ ಮಾಹಿತಿ ದೊರೆತಲ್ಲಿ ಕುಲಗೋಡ ಪೊಲೀಸ್ ಠಾಣೆ ಪೋನ ನಂ:08334-222233 ಅಥವಾ ಇ ಮೇಲ್ ಐಡಿ- Kulgodbgm@ksp.gov.in ಗೆ ಸಂಪರ್ಕಿಸಬಹುದಾಗಿದೆ ಎಂದು ಕುಲಗೋಡ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬ್ಯಾಲೆಟ್ ಪೇಪರ್‌ನಲ್ಲೇ ಕಾಂಗ್ರೆಸ್ ಸೋತಿದೆ, ಪತನದ ದಿನಗಳು ಹತ್ತಿರ ಬರ್ತಿದೆ: ನಿಖಿಲ್ ಕುಮಾರಸ್ವಾಮಿ

Spread the loveರಾಮನಗರ: ಕಾಂಗ್ರೆಸ್  ಇವಿಎಂ ಮೇಲೆ ಅನುಮಾನ ಪಟ್ಟು, ಬ್ಯಾಲೆಟ್ ಪೇಪರ್  ಚುನಾವಣೆ ಬೇಕು ಅಂತಿದ್ದರು. ಈಗ ಬ್ಯಾಲೆಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ