Breaking News

ಜೈಲಿಗೆ ಬರುವಾಗ ಊಟ ಕೇಳಿದ – ಜೀಪ್‌ ನಿಲ್ಲಿಸುತ್ತಿದ್ದಂತೆ ಸಿಬ್ಬಂದಿಗೆ ಹಲ್ಲೆ ಮಾಡಿ ಪರಾರಿಯಾದ ಆರೋಪಿ

Spread the love

ಶಿವಮೊಗ್ಗ: ಕಲಬುರಗಿ ಜೈಲಿನಿಂದ  ಖೈದಿಗಳು ಪರಾರಿಯಾದ ಘಟನೆ ಮಾಸುವ ಮುನ್ನವೇ ಶಿವಮೊಗ್ಗದಲ್ಲಿ  ಸಹ ಅಂತಹದ್ದೇ ಒಂದು ಪ್ರಕರಣ ನಡೆದಿದೆ. ಜೈಲಿಗೆ ಕರೆದೊಯ್ಯುತ್ತಿದ್ದ ಆರೋಪಿಯೊಬ್ಬ ಅರಣ್ಯ ಇಲಾಖೆ ಸಿಬ್ಬಂದಿಗೆ  ಚಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದಾನೆ.

ಹೊಸನಗರ  ತಾಲೂಕಿನ ಅಡುಗೋಡಿ ನಿವಾಸಿ ವೆಂಕಟೇಶ್ (36) ಅರಣ್ಯ ಇಲಾಖೆ ವಶದಿಂದ ಪರಾರಿಯಾದ ಆರೋಪಿ. ಈತ 2019-20 ರಲ್ಲಿ ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಚಕ್ರಪಾಣಿ ಅವರ ಮೇಲೆ ಹಲ್ಲೆ ಮಾಡಿದ ಆರೋಪವಿದೆ. ಈ ಸಂಬಂಧ ದಾಖಲಾಗಿದ್ದ ಕರ್ತವ್ಯಕ್ಕೆ ಅಡ್ಡಿ- ಹಲ್ಲೆ ಕೇಸ್‌ ಅಡಿ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದರು. ಬಳಿಕ ಕೋರ್ಟ್‌ಗೆ ಹಾಜರುಪಡಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.

ಕೋರ್ಟ್‌ ಆದೇಶದಂತೆ ಆತನನ್ನು ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಕರೆದೊಯ್ಯಲಾಗುತ್ತಿತ್ತು. ಹೊಸನಗರದ ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ಬರುತ್ತಿದ್ದಂತೆ, ಹಸಿವಾಗುತ್ತಿದೆ. ಊಟ ಬೇಕು ಎಂದು ಆರೋಪಿ ಕೇಳಿದ್ದಾನೆ. ಜೀಪ್‌ ನಿಲ್ಲಿಸಿ, ಡಿಆರ್‌ಎಫ್‌ಓ ಸುನೀಲ್ ಡಿ ಕುಂಬಾರ್ ಹಾಗೂ ಇಬ್ರಾಹಿಂ ಊಟ ತರಲು ತೆರಳಿದ್ದರು. ಈ ವೇಳೆ ಜೀಪ್‌ನಲ್ಲಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.

ಬಟ್ಟೆಮಲ್ಲಪ್ಪ ಸುತ್ತಮುತ್ತ ಆರೋಪಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ